Breaking News

ಮಾಜಿ ಶಾಸಕ ರಘುಪತಿ ಭಟ್ರಿಗೆ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಮಿಸ್, ಪಕ್ಷೇತರ ಸ್ಪರ್ಧೆಗೆ ಕೇಸರಿ ಕಟ್ಟಾಳು ರೆಡಿ

 

ಉಡುಪಿ: ಬಿಜೆಪಿ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಬರುವ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೇ ಎಂದು ಬಿಜೆಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಿದರು.

ವಿಧಾನಸಭೆ ಚುನಾವಣೆಗೆ ಸ್ಪರ್ಧೆಯ ವೇಳೆ ಕೂಡ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪಿತ್ತು, ಹೀಗಾಗಿ ಈಗ ವಿಧಾನ ಪರಿಷತ್‌ ಆರು ಸ್ಥಾನಗಳಿಗೆ ನಡೆವ ಚುನಾವಣೆ ನಡೆಯಲಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಅವರು, ಇಲ್ಲಿಯೂ ಕೂಡ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.

  1.  

ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನ ಆಗಿದ್ದು, ತಾನು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಪಕ್ಷ ಕೊನೆ ಕ್ಷಣದಲ್ಲಿ ಮನಸ್ಸು ಬದಲಿಸಿ ತನಗೆ ಟಿಕೆಟ್‌ ನೀಡಿದರೆ ಬಿಜೆಪಿಯಿಂದ ಸ್ಪರ್ಧೆ ಮಾಡುವೇ, ಇಲ್ಲದೇ ಇದ್ದಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದು ಖಚಿತ. ಇದು ಪಕ್ಷದ ವಿರುದ್ಧದ ಬಂಡಾಯವಲ್ಲ ಎಂದರು.

ಪಕ್ಷೇತರನಾಗಿ ಸ್ಪರ್ಧಿಸುವುದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಪಕ್ಷದ ಅಧಿಕೃತ ಅಭ್ಯರ್ಥಿ ಗೆದ್ದರೂ ಪಕ್ಷಕ್ಕೆ ಲಾಭ, ಪಕ್ಷೇತರನಾಗಿ ಗೆದ್ದರೂ ನಾನು ಬಿಜೆಪಿ ಸದಸ್ಯನಾಗಿಯೇ ಮುಂದುವರಿಯುತ್ತೇನೆ. ಸೋತರೆ ನಾನು ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿರುತ್ತೇನೆ. ಕಾಂಗ್ರೆಸ್ ಟಿಕೆಟ್‌ ನಿಂದ ಸ್ಪರ್ಧಿಸುವ ಅಥವಾ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇಲ್ಲವೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com