Breaking News

ಬೆಳೆ ಹಾನಿ ಪರಿಹಾರ ಸಿಗದ ರೈತರು ತಕ್ಷಣವೇ ಸಂಪರ್ಕಿಸಿ: ಜಿಲ್ಲಾಧಿಕಾರಿ ಮಾನಕರ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳೆ ಹಾನಿ ಕುರಿತು ಪರಿಹಾರದ ಅನುದಾನವು ಹಲವು ರೈತರ ಖಾತೆಗೆ ಈಗಾಗಲೇ ಜಮಾ ಆಗಿದೆ. ಆದರೆ ಬ್ಯಾಂಕ್ ಖಾತೆಯಲ್ಲಿನ ನ್ಯೂನತೆ ಹಾಗೂ ವಿವಿಧ ತಾಂತ್ರಿಕ ಕಾರಣಗಳಿಂದ ಜಿಲ್ಲೆಯ 5774 ರೈತರ ಬ್ಯಾಂಕ್ ಖಾತೆಗೆ ಅನುದಾನ ಜಮೆ ಆಗದೇ ಇರುವುದು ಕಂಡು ಬಂದಿರುತ್ತದೆ. ಆದ್ದರಿಂದ ಈವರೆಗೆ ಬೆಳೆ ಹಾನಿ ಪರಿಹಾರ ಜಮೆ ಆಗದ ರೈತರ ಬ್ಯಾಂಕ್ ಖಾತೆಯಲ್ಲಿನ ನ್ಯೂನತೆ ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಜಿಲ್ಲೆಯ ಬರ ಪೀಡಿತ 11 ತಾಲ್ಲೂಕುಗಳಲ್ಲಿಯ ತಹಶೀಲ್ದಾರ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿರುತ್ತದೆ. ಆದ್ದರಿಂದ ಜಿಲ್ಲೆಯ ರೈತರು ಮೇ 19 ರೊಳಗೆ ತಮ್ಮ ವ್ಯಾಪ್ತಿಯ ತಹಶೀಲ್ದಾರ ಕಚೇರಿಯ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಿ ಬೆಳೆ ಪರಿಹಾರದ ಅನುದಾನವನ್ನು ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

  1.  

ಕಾರವಾರ 08382-223350, ಅಂಕೋಲಾ 08388-230243, ಕುಮಟಾ 08386-222054, ಭಟ್ಕಳ 08385-

226422, ಶಿರಸಿ 08384-226383, ಸಿದ್ದಾಪುರ 08389-230127, ಯಲ್ಲಾಪುರ 9902571927, ಮುಂಡಗೋಡ 08301-222122, ಹಳಿಯಾಳ 08284-220134, ಜೋಯಡಾ ಮೊ.ಸಂ. 7483628982, ದಾಂಡೇಲಿ 08284-295959 ರೈತರ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com