Breaking News

ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್, ದ.ಕ. ಉಡುಪಿಗೆ ಅರೇಂಜ್ ಅಲರ್ಟ್, ಘೋಷಿಸಿದ ಹವಾಮಾನ ಇಲಾಖೆ

 

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದ್ದು, ರಾಜ್ಯದ 14 ಜಿಲ್ಲೆಗಳಿಗೆ ಅರೇಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಮೂರು ದಿನಗಳ ಕಾಲ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

  1.  

ದಕ್ಷಿಣ ಒಳನಾಡಿನ ಜಿಲ್ಲೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಹಾಗೂ ಚಾಮರಾಜನಗರದಲ್ಲಿ ಯೆಲ್ಲೋ ಅಲರ್ಟ್,   ದಾವಣಗೆರೆಯಲ್ಲಿ ಮೇ 22ರಂದು, ಮಂಡ್ಯದಲ್ಲಿ ಮೇ 23ರಂದು ಯೆಲ್ಲೋ ಅಲರ್ಟ್,  ಮೈಸೂರಿನಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್,  ರಾಮನಗರ ಜಿಲ್ಲೆಯಲ್ಲಿ, ತುಮಕೂರಿನಲ್ಲಿ ಮೇ 20ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com