Breaking News

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಕೈ ಹಿಡಿಯಿರಿ‌, ಸರಕಾರದ ಗ್ಯಾರಂಟಿಗಳೇ ಶ್ರೀರಕ್ಷೆ: ಡಾ. ಕುಬೇರಪ್ಪ

 

ಮಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಶಿಕ್ಷಕರು ಮತ್ತು ಪದವೀಧರರಿಗೆ ಸಾಕಷ್ಟು ಸೌಲಭ್ಯ ನೀಡಿದ್ದು, ಪರಿಷತ್ ಚುನಾವಣೆಯಲ್ಲಿ ಶಿಕ್ಷಕರು ಮತ್ತು ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಕೈ ಹಿಡಿಯುವ ಮೂಲಕ ಋಣ ತೀರಿಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯ ಘಟಕದ ಅಧ್ಯಕ್ಷ ಡಾ. ಆರ್.ಎಂ. ಕುಬೇರಪ್ಪ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

6 ನೇ ವೇತನ ಆಯೋಗದ ಎಲ್ಲ ಸಿಫಾರಸ್ಸುಗಳನ್ನು ಯತಾವತ್ತಾಗಿ ಆಗ ಮುಖ್ಯಮಂತ್ರಿ ಆಗಿದ್ದ ಸಿದ್ದ್ಧರಾಮಯ್ಯ ಅವರು ಜಾರಿಗೊಳಿಸಿದ್ದರಿಂದ, ಕನಿಷ್ಠ ಹತ್ತು ಸಾವಿರದಿಂದ ಇಪ್ಪತ್ತು ಸಾವಿರದ ವರೆಗೆ ಲಾಭ ಆಗಿದೆ. ಅವರ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಉದ್ಯೋಗಗಳನ್ನು ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ. 25 ವರ್ಷಗಳಿಂದ ರಾಜ್ಯದ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಆಗಿರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಿದ್ದರಿಂದ ಪಿಎಚ್‌ಡಿ ಪಡೆದು ನಿರುದ್ಯೋಗಿಯಾದ ಆಗಿದ್ದ ಸಾವಿರಾರು ಯುವಕರಿಗೆ ಉದ್ಯೋಗದ ಅವಕಾಶಗಳನ್ನು ನೀಡಿದ್ದಾರೆ ಎಂದರು.

  1.  

ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲಿ ನಿರುದ್ಯೋಗ ಪದವೀಧರ ಯುವಕ ಮತ್ತು ಯುವತಿಯರಿಗೆ 3,000 ರೂ., ಡಿಪ್ಲೊಮ ಪದವೀಧರರಿಗೆ ತಿಂಗಳಿಗೆ 1,500 ರೂ. ತಿಂಗಳು ನೀಡುತ್ತಿದ್ದು, ಈಚೆಗೆ ಅತಿಥಿ ಉಪನ್ಯಾಸಕರು ಮಾಡಿದ ಹೋರಾಟಕ್ಕೆ ಸ್ಪಂದಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸರಕಾರವು ಸರಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರಿಗೆ ಅವರ ವೇತನವನ್ನು ತಿಂಗಳಿಗೆ ಕನಿಷ್ಠ ರೂ. 38 ಸಾವಿರದಿಂದ 42 ಸಾವಿರದವರೆಗೆ ಹೆಚ್ಚಿಸಿದೆ. ಅಲ್ಲದೆ ಅವರಿಗೆ ಆರೋಗ್ಯ ವಿಮೆ, ನಿವೃತ್ತಿ ಹೊಂದುವಾಗ ಪ್ರತಿಯೊಬ್ಬರಿಗೂ 5 ಲಕ್ಷ ರೂ.ಇಡಿಗಂಟು ಹಣ ನೀಡುವುದಾಗಿ ಆದೇಶ ಮಾಡಲಾಗಿದೆ. ಈಗಾಗಲೇ ಏಳನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಮಧ್ಯಂತರ ಪರಿಹಾರವನ್ನು ಘೋಷಿಸಿದ್ದು ಅತೀ ಶೀಘ್ರದಲ್ಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಸರಕಾರ ಜಾರಿ ಮಾಡಲಿದೆ. ರಾಜ್ಯದ ಎಲ್ಲಾ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ ಅಥವಾ ನಿಧನದಿಂದ ಖಾಲಿಯಾದ ಶಿಕ್ಷಕರ ಹುದ್ದೆಗಳನ್ನು 2015ರ ವರೆಗೆ ಭರ್ತಿ ಮಾಡಲಾಗಿದೆ ಎಂದರು.

ಹಾವೇರಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಂಕರ್ ಎಂ, ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರಜ್‌ ಪಾಲ್, ಪ್ರಮುಖರಾದ ಶುಭೋದಯ ಆಳ್ವ, ಎಲಿಸ್ಟರ್, ನಝೀರ್ ಬಜಾಲ್ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com