Breaking News

ಪಟ್ಲ ಫೌಂಡೇಶನ್ ಕಲಾವಿದರಿಗೆ ಪಾಲಿನ ತಾಯಿ: ಕೂಳೂರು ಕನ್ಯಾನ ಸದಾಶಿವ ಶೆಟ್ಟಿ

 

ಮಂಗಳೂರು: ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆ. ಇಂತಹ ಯಕ್ಷಗಾನ ಹಾಗೂ ಕಲಾವಿದರ ಪಾಲಿಗೆ ತಾಯಿಯ ರೂಪದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೆಲಸ ಮಾಡುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ಹೇರಂಭ ಕೆಮಿಕಲ್ಸ್ ಇಂಡಸ್ಟ್ರಿಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಕ್ಷಗಾನದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದರಿದ್ದರು. ಆಗ ಕಲಾವಿದರಿಗೆ ಆರ್ಥಿಕ ಸಂಕಷ್ಟಗಳಿತ್ತು. ಇದನ್ನು ಅರಿತುಕೊಂಡು ಯಕ್ಷಗಾನ ಕಲಾವಿದರಿಗೆ ನೆರವಾಗುವ ದೃಷ್ಟಿಯಲ್ಲಿ ದಾನಿಗಳನ್ನು ಒಗ್ಗೂಡಿಸಿಕೊಂಡು ಪಟ್ಲ ಸತೀಶ್ ಶೆಟ್ಟಿ ಅವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ. ಪ್ರತೀ ವರ್ಷ ನಾವು ಯಕ್ಷಗಾನ ಕಲಾವಿದರಿಗಾಗಿ ಹೊಸ ಹೊಸ ಯೋಜನೆ ಮತ್ತು ಯೋಚನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಎಡನೀರು ಮಠದ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ, 9 ನೇ ವರ್ಷದ ಸಂಭ್ರಮದಲ್ಲಿರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶಕ್ತ ಕಲಾವಿದರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯ. 40 ಬೇರೆ ಬೇರೆ ಊರುಗಳಲ್ಲಿ ಸಂಘಟನೆ ವಿಸ್ತರಿಸಲ್ಪಟ್ಟಿದ್ದು ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾರ್ಥಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದು ಯಕ್ಷ ಕಲಾಭಿಮಾನಿಗಳಿಗೆ ಸಂತಸದ ವಿಷಯ ಎಂದರು.

  1.  

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಪಟ್ಲ ಫೌಂಡೇಶನ್ ಟ್ರಸ್ಟ್ ದೇವಸ್ಥಾನವಿದ್ದಂತೆ, ದಾನಿಗಳು ಇಲ್ಲಿ ದೇವರಿದ್ದಂತೆ. ಕಷ್ಟದಲ್ಲಿ ಬರುವ ಕಲಾವಿದರಿಗೆ ಪಟ್ಲ ಸತೀಶ್ ಶೆಟ್ಟಿ ಅವರು ಬೆನ್ನು ತಟ್ಟಿ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ವೆಂಕಟ್ರಮಣ ಅಸ್ರಣ್ಣ ಅವರು ಮಾತನಾಡಿ, “ಪಟ್ಲರು ಪರೋಪಕಾರಕ್ಕಾಗಿ ಸಂಘಟನೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಬಹಳಷ್ಟು ಕಲಾವಿದರಿಗೆ ನಾನಾ ರೀತಿಯಲ್ಲಿ ನೆರವಾಗಿದ್ದಾರೆ. ಇನ್ನು ಮುಂದೆಯೂ ಇವರ ಸಂಘಟನೆ ರಾಜ್ಯದೆಲ್ಲೆಡೆ ವಿಸ್ತರಣೆಯಾಗಲಿ. ಪಟ್ಲರ ಕೀರ್ತಿ ಎಲ್ಲೆಡೆ ಹರಡಲಿ ಎಂದರು.

ವಿವಿಧ ಕ್ಷೇತ್ರಗಳ ಸಾಧಕರಿಗೆ 2024ರ ಯಕ್ಷಧ್ರುವ ಕಲಾ ಗೌರವ ಸಮರ್ಪಿಸಲಾಯಿತು. ವೈದಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಯಾಜಿ ನಿರಂಜನ್ ಭಟ್, ಮಾಧ್ಯಮ ಕ್ಷೇತ್ರದಲ್ಲಿ ಚಿದಂಬರ ಬೈಕಂಪಾಡಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲೆ.ಕ. ವಿನ್ಸೆಂಟ್ ಡಿಸೋಜ, ಕಮಾಂಡರ್ ಶಾಮ್ ರಾಜ್, ಕಲಾ ಸಂಘಟನೆಗಾಗಿ ಯಕ್ಷಗಾನ ಅಭ್ಯಾಸ ತರಬೇತಿ ದುಬೈ, ಶಾಸ್ತ್ರೀಯ ಸಂಗೀತಕ್ಕಾಗಿ ಕುದುಮಾರು ಎಸ್. ವೆಂಕಟರಾವ್, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಡಾ. ರಮಾನಂದ ಬನಾರಿ, ಹರಿಕಥೆ ಜಗದೀಶ್ ದಾಸ್ ಪೊಳಲಿ, ರಂಗಭೂಮಿ ಸಾಧನೆಗಾಗಿ ಲಕ್ಷ್ಮಣ ಕುಮಾರ್ ಮಲ್ಲೂರು, ಭರತನಾಟ್ಯ ಕಮಲಾಕ್ಷ ಆಚಾರ್ ಬೆಳ್ತಂಗಡಿ, ಕಂಬಳ ಕ್ಷೇತ್ರದಲ್ಲಿ ಅಶೋಕ್ ಶೆಟ್ಟಿ ಬೇಲಾಡಿ, ಯಕ್ಷಗಾನ ಚಿದಂಬರ ಬಾಬು ಪೂಜಾರಿ, ಯಕ್ಷಗಾನ(ಬಡಗು) ನಿರ್ಜೆಡ್ದು ಚಂದ್ರ ಕುಲಾಲ್, ಯಕ್ಷಗುರು ಮಹಾವೀರ ಪಾಂಡಿ, ಹವ್ಯಾಸಿ ಜಗನ್ನಾಥ ಶೆಟ್ಟಿ ಸಚ್ಚರಿಪೇಟೆ, ಮಹಿಳಾ ಪೂರ್ಣಿಮಾ ಯತೀಶ್ ರೈ, ದೈವಾರಾಧನೆ ಕ್ಷೇತ್ರದಲ್ಲಿ ಕೊರಗ ಪಾಣಾರ, ಭಜನೆ ಭೋಜ ಸುವರ್ಣ ಕುಲಶೇಖರ ಅವರನ್ನು ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಅರೋಗ್ಯ ಶಿಬಿರವನ್ನು ಕಿಟ್ ನೀಡುವ ಮೂಲಕ ಉದ್ಘಾಟಿಸಿದ ಡಾ.ರವೀಶ್ ತುಂಗಾ ಅವರು, “ಪಟ್ಲ ಸಂಭ್ರಮ ತುಳುನಾಡಿನ ಉತ್ಸವವಾಗಿದೆ. ಪಟ್ಲರು ತುಳುನಾಡಿನ ದಾನಿಗಳನ್ನು ಒಟ್ಟುಗೂಡಿಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಕಲಾವಿದರಿಗೆ ಅರೋಗ್ಯ ಶಿಬಿರದ ಜತೆಗೆ ವಿಮೆ ಸೌಲಭ್ಯ ಕಲ್ಪಿಸಿರುವುದು ದೇವರು ಮೆಚ್ಚುವ ಕೆಲಸ ಎಂದರು.

ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ. ಶ್ರೀಧರ್ ಶೆಟ್ಟಿ ನೆರವೇರಿಸಿದರು. ವೇದಿಕೆಯಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ, ಪಾವಂಜೆ ಕ್ಷೇತ್ರದ ಆಡಳಿತ ಮಂಡಳಿ ಮೊಕ್ತೇಸರ ಶಶೀಂದ್ರ ಕುಮಾರ್, ಡಾ.ಪದ್ಮನಾಭ ಕಾಮತ್, ಬಿಬಿಎಂಪಿ ಜಂಟಿ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮಯಾಜಿ, ನಿಟ್ಟೆ ಯೂನಿವರ್ಸಿಟಿ ಪ್ರೊ. ಡಾ.ಬಿ.ಸತೀಶ್ ಕುಮಾರ್ ಭಂಡಾರಿ, ಹಿರಿಯ ವಕೀಲ ಭೋಜ ನಾರಾಯಣ ಪೂಜಾರಿ, ಭುವನೇಶ್ ಪಚ್ಚಿನಡ್ಕ, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಜಯರಾಂ ಶೇಖ, ಕರುಣಾಕರ ರೈ ದೇರ್ಲ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಾಲಕೃಷ್ಣ ಹೆಗ್ಡೆ, ಭುಜಬಲಿ ಧರ್ಮಸ್ಥಳ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ, ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ,ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಅಶೋಕ್ ಆರ್ ಶೆಟ್ಟಿ ಪೆರ್ಮುದೆ, ಡಾ ಮನುರಾವ್, ದುರ್ಗಾಪ್ರಸಾದ್ ಪಿವಿ ಪಡುಬಿದ್ರೆ, ಜೊತೆ ಕಾರ್ಯದರ್ಶಿ ರಾಜೀವ್ ಪೂಜಾರಿ ಕೈಕಂಬ, ರವಿಚಂದ್ರ ಶೆಟ್ಟಿ ಅಶೋಕನಗರ ಇದ್ದರು. ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ರವಿ ಶೆಟ್ಟಿ ವಂದಿಸಿದರು. ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com