Breaking News

ಭಾರತ್ ಮಾತಾಕೀ ಜೈ ಎಂದವರಿಗೆ ಚೂರಿ ಇರಿತ, ಸರಕಾರದ ವಿರುದ್ದ ಆಕ್ರೋಶ: ಸಂಸದ ಕ್ಯಾ. ಬ್ರಿಜೇಶ್ ಚೌಟ

 

ಮಂಗಳೂರು: ಬೋಳಿಯಾರ್‌ ನಲ್ಲಿ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಚೂರಿ ಇರಿತ ಪ್ರಕರಣವನ್ನು ಪೊಲೀಸ್ ಇಲಾಖೆ ಯಾರ ಮುಲಾಜಿಗೆ ಒಗಗಾಗದೇ ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತವಾದ ಕಾನೂನು ಕ್ರಮಕೈಗೊಳ್ಳಬೇಕು. ಘಟನೆ ಹಿಂದಿರುವ ಮತಾಂಧ ಶಕ್ತಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಇಲ್ಲದೇ ಹೊದಲ್ಲಿ ಬಿಜೆಪಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಪೊಲೀಸ್ ಇಲಾಖೆ ಸ್ವತಂತ್ರ, ಸಾಂವಿಧಾನಿಕ ಬದ್ಧತೆಯ ಆಧಾರದಲ್ಲಿ ಈ ಪ್ರಕರಣವನ್ನು ತನಿಖೆ ಮಾಡಬೇಕು. ಕಾಂಗ್ರೆಸ್‌ ಅಣತಿಯಂತೆ ಕೆಲಸ ಮಾಡಬಾರದು. ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿಯಲಾಗಿದೆ. ಇನ್ನು ಒಬ್ಬರನ್ನು ಮನ ಬಂದಂತೆ ಥಳಿಸಲಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗಾಯಾಳುಗಳು ಚಿಕಿತ್ಸೆ ಪಡೆಯುವ ಆಸ್ಪತ್ರೆಗೆ ಬೇರೆ ಕಾರ್ಯಕ್ರಮದ ನಿಮಿತ್ತ ಬಂದಿದ್ದರು, ಆದರೆ ಅವರು ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದವರನ್ನು ಬಂದು ಮಾತನಾಡಿಸದೇ ಇರುವುದು ಅವರ ಕೆಟ್ಟ ಮನಸ್ಸುನ್ನು ಪ್ರದರ್ಶನ ಮಾಡಿದೆ ಎಂದರು.

ಇನ್ನು ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಹಲವಾರಿ ಬಾರಿ ಸುತ್ತಾಡಿದರು ಒಂದು ಗಳಿಗೆ ಆಸ್ಪತ್ರೆಗೆ ಬಂದು ಭೇಟಿ ನೀಡುವ ಔದಾರ್ಯ ಮೆರೆದಿಲ್ಲ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು ಈಗಾಗಲೇ ಭೇಟಿ ನೀಡಿ ಸಾಂತ್ವನ ಹೇಳಿದ್ದೇವೆ. ಇದೇ 12 ರಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದರು.

  1.  

ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ್ ಅವರು ಮಾತನಾಡಿ, ಚೂರಿ ಇರಿತಕ್ಕೆ ಒಳಗಾದವರಿಗೆ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸರಕಾರ ಅವರಿಗೆ ಪರಿಹಾರ ಘೋಷಣೆ ಮಾಡಬೇಕು. ಅವರ ಚಿಕಿತ್ಸೆಯ ಖರ್ಚು ವೆಚ್ಚವನ್ನು ಭರಸಿಬೇಕು. ರಾಜ್ಯದಲ್ಲಿ ಸಿದ್ದರಾಮ್ಯ ಅವರ ಸರಕಾರ ಬಂದಾಗಿನಿಂದ ಹಿಂದೂಗಳ ಮೇಲೆ ಹಲ್ಲೆಯಂತಹ ಕೃತ್ಯಗಳು ನಡೆಯುತ್ತಿವೆ. ಒಂದು ರೀತಿಯಲ್ಲಿ ಆತಂಕದಲ್ಲಿ ಬದುಕಬೇಕಾದ ಸ್ಥಿತಿ ಬಂದಿದೆ ಎಂದರು.

ಸಿದ್ದರಾಮಯ್ಯ ಅವರು ಜಿಲ್ಲೆಗೆ ಬಂದಾಗ ಶಾಸಕ ಮೇಲೆ ಪ್ರಕರಣ ದಾಖಲಾಗುತ್ತದೆ, ಇನ್ನೂ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿದ್ದಾಗ ಹಲ್ಲೆಗೆ ಒಳಗಾದವರ ಮೇಲೆಯೇ ಪ್ರಕರಣ ದಾಖಲಾಗುತ್ತವೆ. ಹೀಗಾದರೆ ಬಿಜೆಪಿ ಇದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದರು.

ಸಂಜಯ್ ಪ್ರಭು, ರವಿಂದ್ರ ಶಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸೇರಿದಂತೆ ಹಲವರು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com