Breaking News

ಕಾರವಾರ: ಅಂತರ ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ, ಗಮನ ಸೆಳೆದ ಸಿಇಒ ಈಶ್ವರ ಕಾಂದೂ ಯೋಗ ಭಂಗಿ

 

ಕಾರವಾರ: ಇಲ್ಲಿನ ಪೋಲಿಸ್‌ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಅಂತರ ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಚಾಲನೆ ನೀಡಿದರು.

ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಆಯುಷ್‌ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ 10ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ್‌ ಕಾಂದೂ ಅವರು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದುದ್ದು ವಿಶೇಷ ಆಗಿತ್ತು.

  1.  

ಜಿಲ್ಲಾಧಿಕಾರಿ ಹಾಗೂ ವಿವಿಧ ಅಧಿಕಾರಿಗಳು ಯೋಗಾಸನ ಆಸನಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

  1.  

WP Twitter Auto Publish Powered By : XYZScripts.com