Breaking News

ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜಿನಲ್ಲಿ ಯೋಗ ಸಂಭ್ರಮ

 

ಮಂಗಳೂರು: 10ನೇ ಅಂತರ ರಾಷ್ಟ್ರೀಯ ಯೋಗ ದಿನವನ್ನು ಬಹಳ ಅದ್ದೂರಿ ಯಾಗಿ ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ಯ ಇಲಾಖೆ ಸಹಯೋಗದಲ್ಲಿ ಅರ್ಥಪೂರ್ಣವಾಗಿ ಯೋಗ ಮಹೋತ್ಸವವನ್ನು ಶುಕ್ರವಾರ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವು ಯೋಗದ ಪ್ರಾಮುಖ್ಯತೆ ಪ್ರಾಚೀನ ಭಾರತೀಯ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಅದ್ಭುತ ವೇದಿಕೆ ಆಗಿತ್ತು. ಈ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ಯ ಇಲಾಖೆ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು.

ಮಂಗಳೂರಿನ ಪ್ರಾಥಮಿಕ ವೈದ್ಯಾಧಿಕಾರಿ ಡಾ. ಸಹನಾ ರಂಗನಾಥ್ ಉಲ್ಲಾಳ ಅವರು ಮಾತನಾಡಿ, ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವವನ್ನು ಸಭೆಗೆ ತಿಳಿಸಿದರು.

  1.  

ಸಹಾಯಕ ಪ್ರಾಧ್ಯಾಪಕ ಡಾ. ಉದಯಕುಮಾರ್ ಅವರು, ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ಧರ್ಮ ನಿಧಿ ಪೀಠ, ಮಂಗಳೂರು ವಿಶ್ವವಿದ್ಯಾಲಯ, ಮಹಿಳಾ ಸಬಲೀಕರಣದಲ್ಲಿ ಯೋಗದ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದರು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರಕಾಶ ಅವರು ಯೋಗದ ಇತಿಹಾಸ ತತ್ವಶಾಸ್ತ್ರ, ಮತ್ತು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳದಬಹುದಾದ ಪ್ರಯೋಜನಗಳ ಕುರಿತು ಮಾತನಾಡಿದರು.

ಈ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಚಾರ್ಯರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.

ಈ ಸಮಾರಂಭದ ಮುಖ್ಯ ಆಕರ್ಷಣೆ ಎಂದರೆ ಯೋಗ ವಿಭಾಗದ ವಿದ್ಯಾರ್ಥಿಗಳು ಸ್ವಸ್ತಿಕ್ ಚಿಹ್ನೆ ಮುಖಾಂತರ ವಿವಿಧ ಯೋಗ ಪ್ರದರ್ಶನಗಳನ್ನು ನೀಡಿದರು.

ಪ್ರಾಂಶುಪಾಲ ಡಾ. ನಂದೀಶ್ ಸ್ವಾಗತಿಸಿದರು. ಡಾ. ಸುಪ್ರಿಯಾ ಜೋಶಿ ವಂದಿಸಿದರು. ವಿದ್ಯಾರ್ಥಿನಿ ಶಾಲೋಮಿ ನಡೆಸಿಕೊಟ್ಟರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com