Breaking News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರು ಎದುರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಪೊಲೀಸ್‌ ಕಸ್ಟಡಿ ಅಂತ್ಯವಾಗಿರುವ ಹಿನ್ನೆಲೆ ಆರೋಪಿಗಳಾದ ದರ್ಶನ್, ಧನರಾಜ್​, ವಿನಯ್, ಪ್ರದೋಶ್​ ಅವರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

  1.  

12 ದಿನಗಳ ಕಾಲ ಕಸ್ಟಡಿ ಪಡೆದು ವಿಚಾರಣೆ ನಡೆಸಿದ ಪೊಲೀಸರು ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದು, ಮತ್ತೆ ಪೊಲೀಸ್‌ ಕಸ್ಟಡಿ ಅಗತ್ಯವಿಲ್ಲ ಎಂದು ಕೋರ್ಟ್​ಗೆ ಪೊಲೀಸರು ವರದಿ ನೀಡಿದ್ದಾರೆ. ಹೀಗಾಗಿ ನ್ಯಾಯಾಧೀಶರು ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್​ನ ಮೊದಲ ಆರೋಪಿ ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳು ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಅವರಿಗೂ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ನ್ಯಾಯಾಧೀಶರು ನ್ಯಾಯಾಲಯದಲ್ಲಿ ನಿಮಗೆ ಕಸ್ಟಡಿಯಲ್ಲಿ ಏನಾದರೂ ಸಮಸ್ಯೆ ಆಯಿತಾ ಎಂದು ಕೇಳಿದ್ದಕ್ಕೆ ದರ್ಶನ್ ಅವರು ಇಲ್ಲ ಸ್ವಾಮಿ ಯಾವುದೇ ತೊಂದರೆ ಆಗಿಲ್ಲ ಎಂದರು.

ನಟ ದರ್ಶನ್ ಅವರು ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್​ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಶನಿವಾರ ಕೋರ್ಟ್‌ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2 ನೇ ಬಾರಿ ಜೈಲು ಸೇರಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com