Breaking News

ಲಂಚದ ಆಸೆಗೆ ಲೋಕಾಯುಕ್ತ ಬಲೆಗೆ ಹೊನ್ನಾವರ ಪಟ್ಟಣ ಪಂಚಾಯಿತಿ ಎಂಜಿನಿಯರ್‌

 

ಹೊನ್ನಾವರ: ವ್ಯಕ್ತಿಯೊಬ್ಬರಿಂದ 60 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಹೊನ್ನಾವರ ಪಟ್ಟಣ ಪಂಚಾಯಿತಿ ಮುಖ್ಯ ಎಂಜನಿಯರ್‌ ಪ್ರವೀಣ್ ಕುಮಾರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧನ ಮಾಡಿದ್ದಾರೆ.
ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ರ ಅವರ ಮಾರ್ಗದರ್ಶನದಲ್ಲಿ ಕಾರವಾರದ ಲೋಕಾಯುಕ್ತ ಇನ್‌ ಸ್ಪೆಕ್ಟರ್‌ ವಿನಾಯಕ್ ಬಿಲ್ಲವ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದು, ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  1.  

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com