ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈಮಹಿಲನ್ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ರೆಡ್ ಆಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.