Breaking News

ಸೆ. 6 ರಿಂದ 8 ರವರಿಗೆ ಅಂತರ ರಾಷ್ಟ್ರೀಯ ಕರಾಟೆ ಟೂರ್ನಿ,ವಿವಿಧ ದೇಶಗಳ ಸ್ಪರ್ಧಿಗಳು: ಎಡಿಸಿ ಸಂತೋಷಕುಮಾರ್

 

ಮಂಗಳೂರು: ಮಂಗಳೂರಿನಲ್ಲಿ ಅಂತರ ರಾಷ್ಟ್ರ ಮಟ್ಟದ ಕರಾಟೆ ಟೂರ್ನಿ ಸೆ. 6 ರಿಂದ 8 ರವರೆಗೆ ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಹೇಳಿದರು.

ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕ್ರೀಡಾಕೂಟದ ಮಾಹಿತಿ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ,  ಈ ಕ್ರೀಡಾಕೂಟಕ್ಕೆ ಜಿಲ್ಲಾಡಳಿತ  ವತಿಯಿಂದ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಕ್ರೀಡಾಕೂಟ ಸಂಘಟಕರು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

  1.  

ಕರಾಟೆ ಕ್ರೀಡಾಕೂಟದ ಸಂಘಟಕ ಡಾ. ರಾಹುಲ್  ಟಿ. ಜಿ ಅವರು ಮಾತನಾಡಿ, ಶೌರ್ಯ ಅಂತರ ರಾಷ್ಟ್ರೀಯ ಕರಾಟೆ ಚಾಂಪಿಯನ್ ಷಿಪ್ -2024”
ಟೂರ್ನಿಯಲ್ಲಿ ವಿವಿಧ ದೇಶಗಳ ಖ್ಯಾತ ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಗಳೂರಿನ ಕೋರ್ಡಲ್ ಚರ್ಚ್ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. 2 ಸಾವಿರಕ್ಕೂ ಅಧಿಕ ಮಂದಿ ವಿವಿಧ ದೇಶಗಳಿಂದ ಈ ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ವಿಶ್ವ ಕರಾಟೆ ಒಕ್ಕೂಟದ ನಿಯಮಾವಳಿಗಳಂತೆ ಪಂದ್ಯಾಟ ನಡೆಯಲಿದೆ ಅಂತರ ರಾಷ್ಟ್ರೀಯ ರೆಫ್ರಿಗಳು ಸ್ಪರ್ಧೆ ನಿರ್ವಹಿಸುವರು ಎಂದು ತಿಳಿಸಿದರು.
ಅಂತರ ರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಹಿನ್ನೆಲೆಯಲ್ಲಿ  ವಸತಿ, ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ  ವಿವಿಧ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ ಎಂದು ಹೇಳಿದರು

ಯುವಜನ ಸೇನೆ ಮತ್ತು ಕ್ರೀಡಾ ಉಪ ನಿರ್ದೇಶಕ ಪ್ರವೀಣ್ ಡಿಸೋಜ, ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಕರಾಟೆ ಸಂಘಟನೆಗಳ ಪದಾಧಿಕಾರಿಗಳಾದ ಸುರೇಂದ್ರ, ಸೂರಜ್ ಶೆಟ್ಟಿ, ರಾಜ್‌ಗೋಪಾಲ್ ರೈ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com