ಮೂಲ್ಕಿ: ಪಟ್ಟಣ ಪಂಚಾಯಿತಿ 2ನೇ ಅವಧಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸತೀಶ್ ಅಂಚನ್ ಆಯ್ಕೆ ಆಗಿದ್ದು, ಉಪಾಧ್ಯಕ್ಷೆಯಾಗಿ ಲಕ್ಷ್ಮೀ ಅವರು ಆಯ್ಕೆಯಾಗಿದ್ದಾರೆ.
ಒಟ್ಟು 18 ಬಲಾಬಲದ ಮೂಲ್ಕಿ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ 9, ಬಿಜೆಪಿ 8 ಮತ್ತು ಜೆಡಿಎಸ್ ಒಂದು ಸ್ಥಾನವನ್ನು ಪಡೆದಿತ್ತು. ರಾಜ್ಯ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದಾಗಿ ಬಿಜೆಪಿ- ಕಾಂಗ್ರೆಸ್ ಬಲಾಬಲ 9-9 ಆಗಿತ್ತು. ಮತದಾನದಲ್ಲಿ ಸಂಸದ ಬೃಜೇಶ್ ಚೌಟ ಮತ್ತು ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಮತಗಳಿಂದಾಗಿ ಈ ಬಾರಿಯೂ ಮೂಲ್ಕಿ ಪಟ್ಟಣ ಪಂಚಾಯತ್ ಬಿಜೆಪಿ ವಶವಾಗಿದೆ.
ಬಿಜೆಪಿ ಅಭ್ಯರ್ಥಿ ಸತೀಶ್ ಅಂಚನ್ ಅವರು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಬಾಲಚಂದ್ರ ಕಾಮತ್ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಗಾದಿಗೆ ಜೆಡಿಎಸ್ ಪಕ್ಷದ ಲಕ್ಷ್ಮಿ ಅವರು ವಿರುದ್ಧ ಕಾಂಗ್ರೆಸ್ ಪಕ್ಷದ ವಿಮಲಾ ಪೂಜಾರಿ ಸ್ಪರ್ಧಿಸಿದ್ದರು.
ಮೂಲ್ಕಿ ನಗರ ಪಂಚಾಯತ್ ಆಡಳಿತ ಅಧಿಕಾರಿ ಪ್ರದೀಪ್ ಕುರ್ಡೇಕರ್, ಉಪ ತಹಶೀಲ್ದಾರ್ ದಿಲೀಪ್ ರೋಡ್ಕರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮಧುಕರ್ ಇದ್ದರು.