Breaking News

ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಿಸಿ ಮುಲ್ಲೈ

 

ಮಂಗಳೂರು:  ಮಹಾತ್ಮ ಗಾಂಧಿಜೀ ಎಂದರೆ ಕೇವಲ ಒಂದು ವ್ಯಕ್ತಿ ಅಥವಾ ವ್ಯಕ್ತಿತ್ವವಲ್ಲ, ಅದು ಇಡೀ ವಿಶ್ವಕ್ಕೆ ಅಹಿಂಸೆ ಮತ್ತು ಶಾಂತಿ ತತ್ವ ಬೋಧಿಸಿದ ಮಹಾಚೇತನ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ಪುರಭವನದ ಎದುರು ಗಾಂಧಿ ಪ್ರತಿಮೆಯ ಬಳಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು

  1.  

ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್ ಕೆ, ಹೆಚ್ಚುವರಿ ಜಿಲ್ಲಾಧಿಕಾರಿ  ಡಾ. ಜಿ ಸಂತೋಷ್ ಕುಮಾರ್, ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಪೊಲೀಸ್ ಕಮಿಷನರ್  ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿಲ್ಲಾ  ವಾರ್ತಾಧಿಕಾರಿ ಖಾದರ್ ಷಾ, ಭಾರತ ಸೇವಾದಳದ ಜಯರಾಮ ರೈ, ಬಶೀರ್ ಬೈಕಂಪಾಡಿ, ಮಂಜೇಗೌಡ ಇದ್ದರು.

ಸಮಾರಂಭದಲ್ಲಿ   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಸ್ವಚ್ಛತಾ ಸೇವಾ ಆಂದೋಲನ ಕಾಯ೯ಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಮಾನ ವಿತರಿಸಲಾಯಿತು.

ಸ್ವಚ್ಛತಾ ಪ್ರಮಾಣ ವಚನ ಸ್ವೀಕರಿಸಲಾಯಿತು.

  1.  

Leave a Reply

Your email address will not be published. Required fields are marked *