Breaking News

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಿಗೆ ಜಿಲ್ಲಾಧಿಕಾರಿ ಮುಲ್ಲೈ ಚಾಲನೆ

 

ಮಂಗಳೂರು: ಕ್ರೀಡೆಯಿಂದ ಪರಸ್ಪರ ಬಾಂಧವ್ಯ ಬೇಸುಗೆಯ ಜತೆಗೆ ಸೌಹಾರ್ದತೆ ನಿರ್ಮಾಣ ಸಾಧ್ಯ. ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಿ ಇದಕ್ಕೆ ಸಹಕಾರಿ ಆಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರ ಪೊಲೀಸ್ ಕಮಿಷನರೆಟ್,  ಜಿಲ್ಲಾ ಪೊಲಿಸ್, ಸಹ್ಯಾದ್ರಿ ಎಂಜಿನಿಯರಿಂಗ್  ಮತ್ತು ಮ್ಯಾನೇಜ್ ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಷನ್ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಿಯನ್ನು ಉದ್ಘಾಟಿಸಿ  ಅವರು ಮಾತನಾಡಿದರು.

ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಮಾತನಾಡಿ, ಜನರನ್ನು ಒಗ್ಗೂಡಿಸುವ ಬ್ರ್ಯಾಂಡ್ ಮಂಗಳೂರು  ಪರಿಕಲ್ಪನೆಯ ವಿವಿಧ ಕಾರ್ಯಕ್ರಮಗಳು  ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನ ಎಂದರು.

  1.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿಪಂ ಸಿಇಒ ಡಾ. ಆನಂದ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್‌ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಪಂದ್ಯಾಟ ಟ್ರೋಫಿ ಅನಾವರಣಗೊಳಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಸಹಾಯಕ ಕಮಿಷನರ್ ಹರ್ಷವರ್ಧನ್ ,ಸಹ್ಯಾದ್ರಿ  ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಟ್ರಸ್ಟಿ ದೇವದಾಸ್ ಹೆಗ್ಡೆ ,ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಂಶುಪಾಲ ಸುಧೀರ್,  ಡೀನ್ ರಮೇಶ್,  ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ, ಸಹಾಯಕ ಪ್ರಾಧ್ಯಾಪಕರಾದ ವರುಣ್, ಪದ್ಮನಾಭ,  ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಕಾರ್ಯಕ್ರಮ ನಿರ್ದೇಶಕ ವಿಲ್ಫ್ರೆಡ್ ಡಿಸೋಜ,ರಾಜೇಶ್ ಪೂಜಾರಿ ಇದ್ದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು  ನಿರೂಪಿಸಿದರು.

ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡಿದ್ದವು.

  1.  

Leave a Reply

Your email address will not be published. Required fields are marked *