Breaking News

ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರ ಪ್ರೌಢಶಾಲೆಗೆ ರಾಜ್ಯ ಮಟ್ಟದ ಉತ್ತಮ ಪ್ರಶಸ್ತಿ

 

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಸ್ನೋಟಿ ಶಿವಾಜಿ ವಿದ್ಯಾಮಂದಿರ ಪ್ರೌಢಶಾಲೆಯು  ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ ಧಾರವಾಡ ನೀಡುವ ರಾಜ್ಯ ಮಟ್ಟದ ಉತ್ತಮ ಪ್ರೌಢಶಾಲಾ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

  1.  

ಪ್ರಶಸ್ತಿಯನ್ನು ಇದೇ 5 ರಂದು ನಡೆಯುವ ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ಆಯೋಜಿಸಲಾಗಿರುವ ಅಂತರ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ. ರಾಜ್ಯದ ಉತ್ತಮ ಪ್ರೌಢಶಾಲೆಗಳ ಶೈಕ್ಷಣಿಕ ಮತ್ತು ಸಾಮಾಜಿಕ ಬದ್ಧತೆ ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣ ಜತೆಗೆ ಸಂಸ್ಕಾರಯುತ ಕಲಿಕೆಯನ್ನು ಮಾಪನ  ಮಾಡಿ, ರಾಜ್ಯದ 5 ಶಾಲೆಗಳಿಗೆ ಪ್ರಶಸ್ತಿ ಘೋಷಿಸಲಾಗಿದ್ದು, ಇದರ ಜತೆಗೆ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರ ಈ ಪ್ರಶಸ್ತಿಗೆ ಆಯ್ಕೆ ಆಗಿದೆ  ಎಂದು ಪ್ರಕರಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *