Breaking News

ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್ ಐಟಿ

 

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.

ಅ.7 ರಂದು ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ವಿಚಾರಣೆಗೊಳಪಡಿಸಿದ್ದ ಎಸ್‌ಐಟಿ, ಬಳಿಕ ಬಂಧನ ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

  1.  

ಈ ಸಂಬಂಧ ನಗರದ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು.

ವಾರಂಟ್ ಪ್ರಶ್ನಿಸಿ ಈಚೆಗೆ ಶ್ರೀಧರ್ ಪೂಜಾರಿ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದು ಪಡಿಸಿತ್ತು. ಇದೀಗ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಡಿವೈಎಸ್ಪಿ ಶ್ರೀಧರ್ ಪೂಜಾರಿ ಅವರನ್ನು ಬಂಧಿಸಿ ಕಾನೂನು ಕ್ರಮ ಕ್ರಮ ಕೈಗೊಂಡಿದ್ದಾರೆ.

  1.  

Leave a Reply

Your email address will not be published. Required fields are marked *