Breaking News

ಮಡಗಾಂವ್ ನಲ್ಲಿ ಇದೇ 26, 27 ರಂದು ಅಖಿಲ ಭಾರತ ಕೊಂಕಣಿ ಪರಿಷತ್ 33 ನೇ ಅಧಿವೇಶನ: ಪ್ರಶಾಂತ್ ನಾಯಕ್

 

ಮಂಗಳೂರು: ಅಖಿಲ ಭಾರತ ಕೊಂಕಣಿ ಪರಿಷತ್ ನ  33 ನೇ ಅಧಿವೇಶನ ಗೋವಾದ ಮಡಗಾಂವ್ ರವೀಂದ್ರ ಭವನದಲ್ಲಿ ಇದೇ 26 ಮತ್ತು 27 ರಂದು ನಡೆಯಲಿದ್ದು,  ಕಾರ್ಯಕ್ರಮವನ್ನು ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸ ಡಾ. ಗಣೇಶ ದೇವಿ ಉದ್ಘಾಟನೆ ಮಾಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ಪ್ರಶಾಂತ್ ನಾಯಕ್ ಅವರು ತಿಳಿಸಿದರು.

ಪರಿಷದ್‌ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು ಒಳಗೊಂಡ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪರಿಷದ್ ಗೆ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗೋವಾದಿಂದ ಪ್ರತಿನಿಧಿಗಳು ಹಾಜರಾಗಲಿದ್ದಾರೆ. ರೆ. ಮೌಝಿನೋ ಅರ್ತಾಡೆ ಅವರು ಪರಿಷದ್ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಎರಡು ವರ್ಷಗಳ ಕಾಲ ಈ ಹುದ್ದೆ ಅಲಂಕರಿಸಲಿದ್ದಾರೆ. ಅನಂತ ಅಗ್ನಿ, ಮಂಗಲ್‌ದಾಸ್ ಭಟ್ ಸಂಘಟನಾ ಸಮಿತಿ ಕಾರ್ಯಾಧ್ಯಕ್ಷ ಮತ್ತು ಕಾರ್ಯದರ್ಶಿ ಆಗಿದ್ದಾರೆ ಎಂದರು.

  1.  

ಪರಿಷತ್ ನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ, ಪ್ರಶಾಂತ್ ನಾಯಕ್ ಮತ್ತು ಸುದೀನ್ ಲೊಲಿಯೇಕರ್ ಅವರನ್ನು ಒಳಗೊಂಡ ಪ್ರತಿನಿಧಿಗಳು ಪರಿಷದಿಗೆ ಪ್ರತಿನಿಧಿಗಳನ್ನು ಆರಿಸುವ ಸಲುವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

1939ರಲ್ಲಿ ಸ್ವರ್ಗೀಯ ಮಾಧವ ಮಂಜುನಾಥ ಶಾನುಭಾಗ್ ಅವರು ಸ್ಥಾಪಿಸಿದ ಪರಿಷದ್ ಕೊಂಕಣಿ ಭಾಷೆ ಮತ್ತು ಅದರ ಜನರ ಅಭಿವೃದ್ಧಿಯತ್ತ ಕಾರ್ಯ ನಿರ್ವಹಿಸುತ್ತಿದೆ. ಆಯೋಜಕರು ಕರ್ನಾಟಕದ ಕೊಂಕಣಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರಿಷದಿಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ ಎಂದು  ಮಾಹಿತಿ ನೀಡಿದರು.‌

ಅಖಿಲ ಭಾರತ ಕೊಂಕಣಿ ಪರಿಷದ್ ಕಾರ್ಯಾಧ್ಯಕ್ಷ ಡಾ. ಕಸ್ತೂರಿ ಮೋಹನ್ ಪೈ, ಎಚ್. ಎಂ. ಪರ‍್ನಾಲ್, ಟೈಟಸ್ ನೊರೊನ್ಹಾ , ಮೆಲ್ವಿನ್ ರೊಡ್ರಿಗಸ್, ಪರಿಷತ್ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ ಇದ್ದರು.

  1.  

Leave a Reply

Your email address will not be published. Required fields are marked *