Breaking News

99 ಕೋಟಿ ವೆಚ್ಚದಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ: ಚಂದ್ರಹಾಸ ಶೆಟ್ಟಿ ರಂಗೋಲಿ

 

ಮಂಗಳೂರು: ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನವದುರ್ಗ ಲೇಖನ ಯಜ್ಞ ಸಮಿತಿ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ತಾಲೂಕು ಸಮಿತಿಗಳ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಇದೇ 11 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಅಡ್ಯಾರ್ ವಿ.ಕೆ .ಶೆಟ್ಟಿ ಸಭಾಂಗಣದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು  ದ. ಕ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  1.  

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ 25 ರಿಂದ ಮಾರ್ಚ್ 5 ತನಕ ನಡೆವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನವದುರ್ಗ ಲೇಖನ ಯಜ್ಞ ಮತ್ತು ನವಚಂಡಿ ಯಾಗ ನಡೆಸಲು ದೇವಿಯ ಅಭಯ ಆಗಿದೆ. 99,999 ಮಂದಿ ಭಕ್ತರು ಈ ನವದುರ್ಗ ಲೇಖನ ಯಜ್ಞದಲ್ಲಿ ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ದಕ್ಷಿಣ ಕನ್ನಡ   ಜಿಲ್ಲಾ ಸಮಿತಿ ಹಾಗೂ 8 ವಿಧಾನಸಭಾ ಕ್ಷೇತ್ರಗಳ ತಲಾ 9 ಪುರುಷ ಹಾಗೂ ಮಹಿಳೆಯರ ತಾಲೂಕು ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ  ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ , ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ  ರವಿ ಶೆಟ್ಟಿ , ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನವದುರ್ಗ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್, ಕಾರ್ಯಾಧ್ಯಕ್ಷರಾದ  ಕೃಷ್ಣ ಪ್ರಸಾದ್ ಅಡ್ಯಂತಾಯ ಮತ್ತು  ಮುನಿಯಾಲು ಉದಯ ಕುಮಾರ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಭಾಗವಹಿಸಲಿದ್ದಾರೆ. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ 99 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿದ್ದು, 50 ಕೋಟಿ ರೂಪಾಯಿ ಈಗಾಗಲೇ  ಸಂಗ್ರಹವಾಗಿದೆ. 20 ಕೆ.ಜಿ ಚಿನ್ನ ಹಾಗೂ 150 ಕೆ.ಜಿ ಬೆಳ್ಳಿಯಿಂದ ಗದ್ದುಗೆ ನಿರ್ಮಾಣಕ್ಕೆ ತಾಯಿಯಿಂದ ಅಭಯ ಸಿಕ್ಕಿದೆ. ಈಗಾಗಲೇ 10 ಕೆ.ಜಿ ಚಿನ್ನ ಹಾಗೂ 100 ಕೆಜಿ ಬೆಳ್ಳಿಯನ್ನು ಭಕ್ತರು ಈ ಕಾರ್ಯಕ್ಕೆ ನೀಡಿದ್ದಾರೆ ಎಂದರು.

ಜಿಲ್ಲಾ ಸಮಿತಿ ಮುಖ್ಯ ಸಂಚಾಲಕ ಪುರುಷೋತ್ತಮ ಕೆ.ಭಂಡಾರಿ ಅಡ್ಯಾರ್, ಸಂಚಾಲಕರಾದ ಮಣೀಶ್ ರೈ, ಸಂತೋಷ್ ಶೆಟ್ಟಿ ಶೆಡ್ಡೆ, ಎ. ಕೃಷ್ಣ ಶೆಟ್ಟಿ ತಾರೆಮಾರ್, ಅಕ್ಷಿತ್ ಸುವರ್ಣ, ಬಾಲಕೃಷ್ಣ ಕೊಟ್ಟಾರಿ, ಪ್ರದೀಪ್ ಆಳ್ವ ಕದ್ರಿ ಮತ್ತು ಅಶ್ವತ್ಥಾಮ ಹೆಗ್ಡೆ ಇದ್ದರು.

  1.  

Leave a Reply

Your email address will not be published. Required fields are marked *