ಕಾರವಾರ: ಜಿಲ್ಲಾ ಪಂಚಾಯತ್ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಸೆಪ್ಟೆಂಬರ್ ತಿಂಗಳಲ್ಲಿ ಭಾಜನರಾದ ಅಂಕೋಲಾ ತಾಲ್ಲೂಕಿನ ಅಚಿವೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಠ್ಠಲ ವಾಸು ಬಾಂದಿ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ್ ಕಾಂದೂ ಅವರು ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.
ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ವೇಳೆಯಲ್ಲಿ ಜಿಲ್ಲಾ ಪಂಚಾಯತ್ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ, ಅಭಿವೃದ್ಧಿ ಶಾಖೆ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಸಹಾಯಕ ಕಾರ್ಯದರ್ಶಿ ಸುನೀಲ ನಾಯ್ಕ, ಆರ್ಡಬ್ಲ್ಯುಎಸ್ ಇಇ, ಎಇಇ ಇದ್ದರು.