ಮಂಗಳೂರು: ಇಲ್ಲಿನ ಪಡೀಲ್ ಬಳಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಅಡ್ಯಾರ್ ಪದವಿನ ಜೋಸೆಫ್ ಮೃತಪಟ್ಟಿರುವ ವ್ಯಕ್ತಿ ಎಂದು ತಿಳಿದು ಬಂದಿದೆ.
ಪಡೀಲ್ನಿಂದ ಬಿ.ಸಿ. ರೋಡ್ ಕಡೆಗೆ ತೆರಳುತ್ತಿದ್ದ ಲಾರಿ ಪೆಟ್ರೋಲ್ ತುಂಬಿಸಿಕೊಂಡು ಬಂಕ್ನಿಂದ ಹೊರ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸವಾರ ಜೋಸೆಫ್ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.