Breaking News

ಅಕ್ರಮ ಆಧಾರ್ ಕಾರ್ಡ್ ಸೃಷ್ಟಿ, ಅನುಮಾನಾಸ್ಪದ ರೀತಿ ಸುತ್ತಾಡುತ್ತಿದ್ದ ಬಾಂಗ್ಲಾದ 7 ಮಂದಿ ಬಂಧನ

 

ಉಡುಪಿ: ಇಲ್ಲಿನ ಮಲ್ಪೆ ಪರಿಸರದ ವ್ಯಾಪ್ತಿಯ ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಏಳು ಮಂದಿ ಬಾಂಗ್ಲಾದೇಶದವರು ಸೇರಿದಂತೆ 9 ಮಂದಿಯನ್ನು ಮಲ್ಪೆ ಪೊಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೀನುಗಾರಿಕಾ ಕಾರ್ಮಿಕರಾಗಿ ಕೆಲಸ ಹುಡುಕಿಕೊಂಡು ಬಂದಿದ್ದ ಬಾಂಗ್ಲಾದೇಶೀಯರು ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಕಲಿ ಪಾಸ್ ಪೋರ್ಟ್ ಬಳಸಿ ದುಬೈಗೆ ತೆರಳಲು ಪ್ರಯತ್ನಿಸಿದ್ದ ಬಾಂಗ್ಲಾ ದೇಶದ ಮುಹಮ್ಮದ್ ಮಾಣಿಕ್ ಎಂಬಾತನನ್ನು ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದು ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಮಾಣಿಕ್ ಚೌಕ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮತ್ತೇ ಹಲವರು ಬಾಂಗ್ಲಾದ ಯುವಕರು ಮಲ್ಪೆಯಲ್ಲಿ ಇರುವುದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಹಕೀಂ ಅಲಿ, ಸುಜೋನ್, ಇಸ್ಮಾಯೀಲ್, ಕರೀಂ, ಸಲಾಂ, ರಾಜಿಕುಲ್, ಮುಹಮ್ಮದ್ ಸಾಜಿಬ್, ಕಾಜೋಲ್, ಉಸ್ಮಾನ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ನಕಲಿ ಆಧಾರ್ ಕಾರ್ಡ್ ಸೃಷ್ಟಿ ಮಾಡಿ 3 ವರ್ಷಗಳಿಂದ ಇಲ್ಲಿಯೇ ವಾಸ ಇರುವ ಬಗ್ಗೆ ತಿಳಿದು ಬಂದಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಉಸ್ಮಾನ್ ಎಂಬ ವ್ಯಕ್ತಿ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ ಮೂಲಗಳಿಂದ ತಿಳಿದು ಬಂದಿದೆ.

  1.  

Leave a Reply

Your email address will not be published. Required fields are marked *