ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದ್ದು, ನವೆಂಬರ್ 13 ರಂದು ಮತದಾನ ನಡೆಯಲಿದೆ ಎಂದು ಆಯೋಗವು ತಿಳಿಸಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಗಳಿಗೆ ನ.13 ರಂದು ಮತದಾನ ನಡೆಯಲಿದ್ದು, ನ.23 ರಂದು ಫಲಿತಾಂಶ ಪ್ರಕಟ ಆಗಲಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವು ಆಗಿರುವ ಶಿಗ್ಗಾಂವಿ ಕ್ಷೇತ್ರ ಹಾಗೂ ಈ. ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ.
ದೇಶದಾದ್ಯಂತ ಒಟ್ಟು 47 ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನೂ ಆಯೋಗವು ಪ್ರಕಟಿಸಿದೆ. ಅ.18 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅ. 25 ಕೊನೆ ದಿನ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಅ. 30 ಕೊನೆಯ ದಿನ ಎಂದು ಆಯೋಗ ತಿಳಿಸಿದೆ.