ಬೆಂಗಳೂರು: 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬೆನ್ನಲ್ಲೆ ಡಿಸಿಎಂ ಡಿಕೆಶಿ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ನನ್ನ ಬಳಿ ಬೇರೇನು ಆಯ್ಕೆಗಳಿವೆ? ನಾನು ಸಿದ್ದರಾಮಯ್ಯ ಅವರ ಜತೆ ನಿಲ್ಲಬೇಕು. ಅವರನ್ನು ಬೆಂಬಲಿಸಬೇಕು. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ ಎಂದು ಹೇಳಿಕೆ ನೀಡಿದ್ದಾರೆ.
ಲಕ್ಷಾಂತರ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ತರಲು ಶ್ರಮ ಪಟ್ಟಿದ್ದಾರೆ. ಅವರ ಬಗ್ಗೆ ಯೋಚಿಸಬೇಕಿದೆ. ಕಾಂಗ್ರೆಸ್ ಸರಕಾರ ಜನಪರ ಯೋಜನೆಗಳನ್ನು ನೀಡುವ ಮೂಲಕ ಜನರಿಗೆ ಹತ್ತಿರವಾಗಿದೆ ಎಂದರು.