ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಬೆಳವಣಿಗೆ ಆಗಿದ್ದು ಶವ ಹೂತಿಟ್ಟ ಪ್ರಕರಣದ ಸಾಕ್ಷಿ ದೂರುದಾರರನ್ನು ಎಸ್.ಐ.ಟಿ ಅಧಿಕಾರಿಗಳು ಬಂಧನ ಮಾಡಿದ್ದು, ಆತನನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಅ. 22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದು, ಈ ನಡುವೆ ಎಸ್ ಐಟಿ ತನಿಖೆಯ ದೃಷ್ಟಿಯಿಂದ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ದೂರುದಾರನನ್ನು ಎಸ್.ಐ.ಟಿ ಕಚೇರಿಗೆ ಕರೆದೊಯ್ದಿದ್ದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಪೊಲೀಸರ ಎದುರು ಸಾಕ್ಷಿ ದೂರುದಾರ ಹಲವಾರು ವಿಚಾರಗಳನ್ನು ಬಾಯಿ ಬಿಟ್ಟಿದ್ದು, ಈ ಬಗ್ಗೆ ಎಸ್.ಐ.ಟಿ ತಂಡ ಮತ್ತೆ ಹೆಚ್ಚಿನ ವಿಚಾರಣೆ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.