Breaking News
KARAVALIDAILYNEWS

ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಬರೆಯಿಸಲು ಮುಖ್ಯ ಕಾರ್ಯದರ್ಶಿಶಾಲಿನಿ ರಜನೀಶ್ ಸೂಚನೆ

 

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಬರೆಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ.

  1.  

ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಸೂಚನೆ ನೀಡಿದ್ದಾರೆ.

ಈಗಾಗಲೇ ಕೆಲ ಇಲಾಖೆಗಳು ಈ ಕುರಿತು ಕ್ರಮವಹಿಸಿವೆ. ಕೆಲವು ಇಲಾಖೆಗಳಲ್ಲಿ ಈ ಬಗ್ಗೆ ನಿರ್ದೇಶನವಿಲ್ಲ ಎಂಬ ಗೊಂದಲಗಳಿಂದ ಶಾಶ್ವತ ಫಲಕಗಳಲ್ಲಿ ಪ್ರದರ್ಶಿಸದೇ ಇರುವುದು ತಿಳಿದು ಬಂದಿದ್ದು, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸದೆ ಇರುವ ಇಲಾಖೆಗಳು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡದೇ ತಕ್ಷಣ ಕ್ರಮಕೈಗೊಂಡು ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ತಮ್ಮ ಇಲಾಖೆಯ ಶಾಶ್ವತ ಫಲಕದಲ್ಲಿ ಪ್ರದರ್ಶಿಸುವಂತೆ ತಿಳಿಸಿದ್ದಾರೆ.

  1.  

Related posts

ನಿಧಿ ಪೈ ಐಎಎಸ್ ಪರೀಕ್ಷೆ ಪಾಸು: ಶಾಸಕ ದಿನಕರ ಶೆಟ್ಟಿ ಸನ್ಮಾನ

Karavalidailynews

ನ್ಯೂ ಇಯರ್‌ ಮೇಸೆಜ್‌ ಗಳ ಬಗ್ಗೆ ಇರಲಿ ಜಾಗೃತಿ, ಯಾವುದೇ ಕಾರಣಕ್ಕೂAPK ಲಿಂಕ್‌ ಕ್ಲಿಕ್‌ ಮಾಡಲೇಬೇಡಿ ಎಂದ ಪೊಲೀಸ್‌ ಪ್ರಕಟಣೆ

Karavalidailynews

ಗುರುಪುರ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವಿಧಾನ ಪರಿಷತ್ ಉಪ ಚುನಾವಣೆ ಪೂರ್ವಭಾವಿ ಸಭೆ

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com