ಕಾರವಾರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ಅವಶ್ಯಕ ದಾಖಲೆಗಳ ಮಾಹಿತಿಯನ್ನು ಗಣತಿದಾರರಿಗೆ ಒದಗಿಸಿ ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಅಕ್ಟೊಬರ್ 7 ರವರೆಗೆ ನಡೆಯಲಿದ್ದು, ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಸದ್ರಿ ಸಮೀಕ್ಷೆಗೆ ದಾಖಲೆ/ಮಾಹಿತಿಯ ಅವಶ್ಯಕತೆ ಇರುತ್ತದೆ ಎಂದರು.