Breaking News
KARAVALIDAILYNEWS

ಅಪರಾಧಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಮಂಗಳೂರು: ಮಾದಕ ವಸ್ತು ಮಾರಾಟ ಜಾಲ ಪತ್ತೆ, ಎರಡು ಪ್ರತ್ಯೇಕರಣದಲ್ಲಿ 6 ಮಂದಿ ಬಂಧನ, ಸಿಸಿಬಿ ಕಾರ್ಯಾಚರಣೆ

 

ಮಂಗಳೂರು: ಮುಂಬೈನಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸ್ ಘಟಕವು ಎರಡು ಪ್ರತ್ಯೇಕ ಪ್ರಕರಣದಲ್ಲಿ 6 ಮಂದಿ ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.

ಕಾವೂರು ಗಾಂಧಿನಗರದ ಮಲ್ಲಿ ಲೇ ಔಟ್‌ಗೆ ಸೆಪ್ಟೆಂಬರ್ 21 ರಂದು ಬೆಳಿಗ್ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕಾವೂರು ಗಾಂಧಿನಗರದ ಚಿರಾಗ್ ಸನಿಲ್ ಮತ್ತು ಅಶೋಕ ನಗರದ ಆಲ್ವಿನ್ ಕ್ಲಿಂಟನ್ ಡಿಸೋಜ ಎಂಬುವವರನ್ನು ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಪತ್ತೆ ಹಚ್ಚಲಾಗಿದೆ.

  1.  

ಆರೋಪಿಗಳಿಂದ 22. 30 ಲಕ್ಷ ರೂಪಾಯಿ ಮೌಲ್ಯದ 111.83 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೊಳಪಡಿಸಿದಾಗ ಕೇರಳದ ಅಬ್ದುಲ್ ಕರೀಂ ಇ.ಕೆ. ಎಂಬುವ ವ್ಯಕ್ತಿ ನೀಡಿದ ಹಣದಿಂದ ಮುಂಬೈಯಲ್ಲಿ ವಾಸ ಇದ್ದ ಆಫ್ರಿಕನ್ ಪ್ರಜೆ ಬೆಂಜಮಿನ್ ಎಂಬಾತನಿಂದ ಆರೋಪಿ ಚಿರಾಗ್ ಸನಿಲ್ ಮಾದಕ ವಸ್ತು ಖರೀದಿ ಮಾಡಿ ತಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತು ಖರೀದಿಸಲು ಹಣ ನೀಡಿದ ಕೇರಳದ ಮಲಪ್ಪುಂರ ಜಿಲ್ಲೆಯ ಅಬ್ದುಲ್ ಕರೀಂ ಇ.ಕೆ ಎಂಬಾತನನ್ನು ಸೆ. 22 ರಂದು ನಗರದ ಕೇಂದ್ರ ರೈಲ್ವೆ ನಿಲ್ದಾಣದ ಬಳಿ ಬಂಧನ ಮಾಡಲಾಗಿದೆ. ಈತನನ್ನು ವಿಚಾರಣೆಗೆ ಒಳಪಡಿಸಿದ್ದಾಗ ಆತನ ಬಳಿಯಿದ್ದ ಕೊಕೇನ್ ಮಾದಕ ವಸ್ತುಗಳನ್ನು ಮೂವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದ. ಮಣ್ಣಗುಡ್ಡೆಯ ಸೆಂಟ್ರಲ್ ವೇರ್ ಹೌಸ್ ಬಳಿ ನಿಂತುಕೊಂಡಿದ್ದ ಕುಲಶೇಖರ ಸಿಲ್ವರ್‌ಗೇಟ್ ನಿವಾಸಿ ಜನನ್ ಯಾನೆ ಜನನ್ ಜಗನ್ನಾಥ, ಬೋಳೂರಿನ ರಾಜೇಶ್ ಬಂಗೇರ ಯಾನೆ ಅಚ್ಚು ಯಾನೆ ರಕ್ಷಿತ್, ಅಶೋಕ ನಗರ ದಂಬೇಲ್ ನಿವಾಸಿ ವರುಣ್ ಗಾಣಿಗ ಎಂಬುವವರನ್ನು ಬಂಧಿಸಲಾಯಿತು. ಈ ಆರೋಪಿಗಳಿಂದ 1,90 ಲಕ್ಷ ಮೌಲ್ಯದ 21.03 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಈ ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

  1.  

Related posts

ತುಳುನಾಡಿನ ಜನಪದ ಕಲಾವಿದ ಮಾಚಾರು ಗೋಪಾಲ ನಾಯ್ಕ್ ನಿಧನ

Karavalidailynews

ಹಿರಿಯ ರಾಜಕಾರಣಿ ಜಾರ್ಜ ಫರ್ನಾಂಡಿಸ್ ಸ್ಮರಿಸಿದ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Karavalidailynews

ಸಿರಸಿ: ಕಳೆದು ಹೋಗಿದ್ದ ಚಿನ್ನದ ತಾಳಿ ಸರ ಕೈಸೇರಿದ ಖುಷಿ, ಹಸ್ತಾಂತರಿಸಿದ ಪಿಎಸ್ ಐ ನಾಗಪ್ಪ

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com