Breaking News
KARAVALIDAILYNEWS

ಆರೋಗ್ಯಜಿಲ್ಲೆಪುತ್ತೂರುಮಂಗಳೂರು

ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ: ಡಿಎಚ್ ಒ ಡಾ. ತಿಮ್ಮಯ್ಯ ಎಚ್ಚರಿಕೆ

 

ಮಂಗಳೂರು: ಸ್ಕ್ಯಾನಿಂಗ್ ಸೆಂಟರ್ ಳಲ್ಲಿ ಸ್ಕ್ಯಾನಿಂಗ್ ನಡೆಸಲು ರೋಗಿಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ತಪ್ಪಿದ್ದಲ್ಲಿ ಅಂತಹ ಸೆಂಟರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಅವರು ಎಚ್ಚರಿಕೆ ನೀಡಿದರು.

ಮಂಗಳವಾರ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿ, ಗುರುತಿನ ಚೀಟಿಯನ್ನು ನಿಖರವಾಗಿ ಪರಿಶೀಲಿಸಬೇಕು. ಈ ಬಗ್ಗೆ ಸ್ಕ್ಯಾನಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ವರದಿಗಳಿಗೆ ಆಯಾ ತಜ್ಞ ವೈದ್ಯರುಗಳೇ ಸಹಿ ಹಾಕಬೇಕು. ಸಿಬ್ಬಂದಿ ಸಹಿ ಹಾಕುವಂತಿಲ್ಲ ಎಂದರು.

ಮೆಡಿಕಲ್‍ಗಳಲ್ಲಿ ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಆಗ್ಗಿಂದಾಗೆ ಭೇಟಿ ನೀಡಿ ಪರಿಶೀಲಿಸಬೇಕು. ಈ ಬಗ್ಗೆ ಔಷಧ ನಿಯಂತ್ರಣ ಇಲಾಖೆಯೊಂದಿಗೆ ಕಾರ್ಯಾಚರಣೆ ನಡೆಸಲಾಗುವುದು ಎಂದರು.

  1.  

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಸಿ, ಪಿಎನ್‍ಡಿಟಿ ಕಾಯ್ದೆ ಹಾಗೂ ಕಾನೂನಿನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಕಾಲೇಜು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಒಟ್ಟು 189 ಸ್ಕ್ಯಾನಿಂಗ್ ಸೆಂಟರ್ ಗಳು ಕಾರ್ಯನಿರ್ವಹಿಸುತ್ತಿದೆ. ಈ ಪೈಕಿ 12 ಸರಕಾರಿ ಹಾಗೂ 177 ಖಾಸಗಿ ಕೇಂದ್ರಗಳಾಗಿವೆ. 2024-25 ರಲ್ಲಿ ಜಿಲ್ಲೆಯಲ್ಲಿ 12,540 ಗಂಡು ಮಕ್ಕಳು ಹಾಗೂ 11758 ಹೆಣ್ಣು ಮಕ್ಕಳು ಜನನ ಆಗಿದ್ದು, ಗಂಡು ಹೆಣ್ಣು ಅನುಪಾತ 938 ಆಗಿದೆ ಎಂದರು.

ಸ್ಕ್ಯಾನಿಂಗ್ ಸೆಂಟರ್ ಗಳ ತಪಾಸಣೆ ಮಾಡಲು ತಂಡ ರಚಿಸಲಾಗಿದ್ದು, 2025 ರ ಏಪ್ರಿಲ್‍ನಿಂದ ಆಗಸ್ಟ್ ವರೆಗೆ ಜಿಲ್ಲೆಯಲ್ಲಿ 274 ಖಾಸಗಿ ಹಾಗೂ 15 ಸ್ಕ್ಯಾನಿಂಗ್ ಸೆಂಟರ್ ಗಳ ತಪಾಸಣೆ ನಡೆಸಲಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಮಟ್ಟದ ಸಲಹಾ ಸಮಿತಿ ಅಧ್ಯಕ್ಷೆ ಡಾ. ಅಮೃತಾ ಭಂಡಾರಿ ವಹಿಸಿದ್ದರು. ಸಮಿತಿ ಸದಸ್ಯರಾದ ಡಾ.ಸುಂದರಿ, ರಾಣಿ ಮಂಗಳ, ಅನಿತ್‍ರಾಜ್ ಭಟ್, ಡಾ. ದೀಪಾ ಪ್ರಭು, ಚಂದ್ರಹಾಸ, ವಸಂತ ಪೆರಾಜೆ, ಡಾ. ನಂಜೇಶ್ ಕುಮಾರ್, ಬಿ.ಎ ಖಾದರ್ ಷಾ ಇದ್ದರು.

  1.  

Related posts

ಗರ್ಭಿಣಿಯರು ಮಗುವಿನ ಆರೋಗ್ಯಕ್ಕೆ ಕಾಳಜಿ ವಹಿಸಿ: ಡಿಸಿ ಗಂಗೂಬಾಯಿ ಮಾನಕರ್

Karavalidailynews

ಶ್ರೀರಾಮನ ಹೆಸರಲ್ಲಿ ಗೂಂಡಾಗಿರಿ ಸರಿಯಲ್ಲ: ಸಚಿವ ದಿನೇಶ್ ಗುಂಡೂರಾವ್

Karavalidailynews

ಮಂಗಳೂರು: ಯೆನೆಪೋಯ ವಿವಿ ಆಶ್ರಯದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com