Breaking News
KARAVALIDAILYNEWS

ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಮಂಗಳೂರನ್ನು ಐಟಿ ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರನ್ನಾಗಿ ರೂಪಿಸುವ ಯತ್ನ: ಸಚಿವ ಪ್ರಿಯಾಂಕ್ ಖರ್ಗೆ

 

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ದೊಡ್ಡ ಟೆಕ್ ಪಾರ್ಕ್ ನಿರ್ಮಾಣ ಮಾಡುವ ಪ್ರಸ್ತಾವ ಶೀಘ್ರವೇ ಅನುಮೋದನೆಗೆ ಸಚಿವ ಸಂಪುಟದ ಎದುರು ಬರಲಿದೆ. ಮುಂದಿನ ಐದುವರ್ಷದೊಳಗೆ ಮಂಗಳೂರನ್ನು ಐಟಿ ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರನ್ನಾಗಿ ರೂಪಿಸಲು ಪ್ರಯತ್ನಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಟಿಎಂಎ ಪೈ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ 5 ನೇ ಆವೃತ್ತಿಯ ‘ಟೆಕ್ನೋವಾಂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

  1.  

3.25 ಎಕರೆ ಜಾಗದಲ್ಲಿ ಮಂಗಳೂರಿನಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಉದ್ದೇಶ ಹೊಂದಲಾಗಿದೆ. 3.5 ಲಕ್ಷ ಚದರ ಅಡಿ ವಿಸ್ತೀರ್ಣದ ಕಟ್ಟಡ ಮತ್ತು 3,500 ಕೋಟಿ ರೂಪಾಯಿಗಳ ದುಡಿಯುವ ಬಂಡವಾಳದ ಜತೆಗೆ ಟೆಕ್ ಪಾರ್ಕ್ ಹುಟ್ಟಿಕೊಳ್ಳಲಿದೆ. ಮಂಗಳೂರಿನ ಅಭಿವೃದ್ಧಿಯ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಜತೆಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಕೇಂದ್ರ ಸರಕಾರದ ವಿಕಸಿತ್ ಭಾರತ್, ಮೇಕ್ ಇನ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳಿಗೆ ರಾಜ್ಯ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧವಿದ್ದು, ಸಂಸದರು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು ಎಂದರು.

ಕರ್ನಾಟಕದ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ)ಗಳ ನೀತಿಯು ಮಹಾತ್ವಾಕಾಂಕ್ಷೆಯಿಂದ ಕೂಡಿದ್ದು, 2029 ರೊಳಗೆ ರಾಜ್ಯದ್ಲಿ 500 ಹೊಸ ಜಿಸಿಸಿಗಳನ್ನು ಆಕರ್ಷಿಸುವ ಗುರಿ ಹೊಂದಿದೆ. ಈ ಮೂಲಕ 3.5 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಮುಂದಿನ ತಿಂಗಳು ಸರಕಾರ ಸುಸ್ಥಿರ ಅಭಿವೃದ್ಧಿಗೆ ಪೂರಕ ಆರ್ಥಿಕ ನೀತಿ ರೂಪಿಸಲಿದೆ ಎಂದರು.

ಇನ್ಫೋಸಿಸ್ ಮಾಜಿ ಸಿಎಫ್ಒ ಮೋಹನದಾಸ್ ಪೈ ಅವರು ಮಾತನಾಡಿ, ರಾಜ್ಯದಲ್ಲಿ ಸ್ಟಾರ್ಟ್ಅಪ್ ಗಳನ್ನು ಪೋಷಿಸಲು ಮತ್ತು ರಾಜ್ಯವನ್ನು ಎಐ ಹಬ್ ಆಗಿಸಲು ‘ಎಲಿವೇಟ್ ಎಐ 100 ಕಾರ್ಯಕ್ರಮ’ದ ಅಗತ್ಯತೆ ಇದೆ ಎಂದರು.
ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿ, ಕೆಡಿಇಎಂ ಮೂಲಕ ರಾಜ್ಯ ಸರಕಾರ ಟೆಕ್ನೋವಾಂಜಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡಿರುವುದು ಅಭಿನಂದನೀಯ. ಜಿಲ್ಲೆಯ ಬಂದರು ಸೇರಿದಂತೆ ಸಾಮರ್ಥ್ಯ ಇರುವ ಇತರ ಉದ್ದಿಮೆ ವಲಯಗಳಲ್ಲಿ ಹೂಡಿಕೆಯನ್ನು ಹೆಚ್ಚಿಸಿ, ಅಭಿವೃದ್ಧಿಯ ದಿಸೆಯಲ್ಲಿ ಜನಪ್ರತಿನಿಧಿಗಳು ಒಂದಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ಕೆಡಿಇಎಂನ ಅಧ್ಯಕ್ಷ ಬಿ.ವಿ. ನಾಯ್ಡು, ಬೆಂಗಳೂರಿನ ಎಸ್ಟಿಪಿಐ ಸಂಸ್ಥೆಯ ಸಂಜಯ್ ತ್ಯಾಗಿ ಮಾತನಾಡಿದರು. ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಹಿರಿಯ ಅಧಿಕಾರಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಇದ್ದರು.

  1.  

Related posts

ಸಾನಿಧ್ಯದಲ್ಲಿ ಕ್ರಿಸ್‌ಮಸ್ ಆಚರಣೆ

Karavalidailynews

ಹಿರಿಯ ರಾಜಕಾರಣಿ, ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ ನಿಧನ, ಸಿಎಂ ಸೇರಿದಂತೆ ಹಲವರಿಂದ ಶ್ರದ್ಧಾಂಜಲಿ

Karavalidailynews

ಮಂಗಳೂರು ವಿವಿ ಅಂತರ ಕಾಲೇಜು ಕಬಡ್ಡಿ: ಮಡಿಕೇರಿ ಚಾಂಪಿಯನ್

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com