ಕಾರವಾರ: ನಮ್ಮ ಸುತ್ತಲಿನ ಪರಿಸರವನ್ನು ಸ್ವರ್ಚಚಗೊಳಿಸುವ ಕಾರ್ಯಕ್ರಮ ಒಂದು ದಿನಕ್ಕೆ ಸೀಮಿತವಾಗದೇ ನಿರಂತರವಾಗಿ ನಡೆಯುವಂತಾಬೇಕು ಮತ್ತು ಸ್ವಚ್ಚತೆಯ ಅರಿವು ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು.
ಜಿಲ್ಲಾ ಪಂಚಾಯತ್ ಆವರಣದಲ್ಲಿ , ಎಕ್ ದಿನ್, ಎಕ್ ಘಂಟಾ, ಏಕ್ ಸಾಥ್ ಕಾರ್ಯಕ್ರಮದ ಅಂಗವಾಗಿ ನಡೆದ ಸಾಮೂಹಿಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾಮೂಹಿಕ ಶ್ರಮದಾನದ ಈ ಸ್ವಚ್ಚತಾ ಕಾರ್ಯದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ನೇತೃತ್ವದಲ್ಲಿ, ಕಾರವಾರ ನಗರದ ಪ್ರಮುಖ ರಸ್ತೆಗಳಲ್ಲಿನ ತ್ಯಾಜ್ಯವನ್ನು ಸಂಗ್ರಹಿಸಿ, ಸ್ವಚ್ಛಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾ ಪಂಚಾಯತನ ಎಲ್ಲಾ ಶಾಖಾ ಮುಖ್ಯಸ್ಥರು, ಜಿಲ್ಲಾ ಪಂಚಾಯಿತಿ ಸಿಬ್ಬಂದಿ , ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.