ಸಿರಸಿ: ತಾಲೂಕಿನ ದಾಸನಕೊಪ್ಪ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಮಹಾದೇವ ಈಳಗೇರ (57) ಅವರು ಶುಕ್ರವಾರ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗ ಇದ್ದಾರೆ. ಶುಕ್ರವಾರ ಮಧ್ಯಾಹ್ನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ, ಅವರು ದಾರಿ ನಡುವೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ಆರ್ಯ ಈಡಿಗ ಸಮಾಜದಲ್ಲಿ ಕೂಡ ಸಕ್ರಿಯರಾಗಿದ್ದರು.
ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾಸನಕೊಪ್ಪದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.