
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ರಚನೆಗೊಂಡಿರುವ ಮಂಕಿ ಪಟ್ಟಣ ಪಂಚಾಯತಿ 20 ವಾರ್ಡ್ ಗಳಿಗೆ ಸಾರ್ವತ್ರಿಕ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.
ಡಿ. 2 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಡಿ. 9 ಕೊನೆ ದಿನ, ಡಿ. 10 ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ.12 ಕೊನೆ ದಿನ ಆಗಿದೆ ಎಂದು ತಿಳಿಸಿದ್ದಾರೆ.
ಮತದಾನದ ಅವಶ್ಯಕತೆ ಇದ್ದರೆ ಡಿ. 21 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.ಡಿ. 25 ರಂದು ಮತಗಳ ಎಣಿಕೆ ತಾಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.


