
ಮಂಗಳೂರು: ಇಲ್ಲಿನ ಸುರತ್ಕಲ್ ಮಹಿಳಾ ವೇದಿಕೆ ಬಂಟರ ಸಂಘದ ಆಶ್ರಯದಲ್ಲಿ ಡಿ. 19 ರಿಂದ 21ರವರೆಗೆ ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಢ್ ಫೆಸ್ಟಿವೆಲ್ ನಡೆಯಲಿದ್ದು, ಕಾರ್ಯಕ್ರಮವನ್ನು ಪಾಲಿಕೆ ಸುರತ್ಕಲ್ ವಲಯ ಕಚೇರಿ ಆಯುಕ್ತೆ ವಾಣಿ ಆಳ್ವ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಸುರತ್ಕಲ್ ಬಂಟರ ಸಂಘದಲ್ಲಿ ಮಹಿಳಾ ವೇದಿಕೆ ನಿರಂತರ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಒಳ್ಳೆಯ ಹೆಸರನ್ನು ಗಳಿಸಿದೆ. ಸಾಂಸ್ಕೃತಿಕ, ಕ್ರೀಡೆ ಸಹಿತ ಎಲ್ಲಾ ವಿಭಾಗಗಳಲ್ಲೂ ಮಹಿಳಾ ವೇದಿಕೆ ಮುಂಚೂಣಿಯಲ್ಲಿದೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ಕಾಟಿಪಳ್ಳ ಶಾಖೆಯ ಶಾಖಾ ವ್ಯವಸ್ಥಾಪಕ ಕೇಸರಿ ಶೆಟ್ಟಿ ಶುಭ ಹಾರೈಸಿದರು. ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆ ಉಪಾಧ್ಯಕ್ಷೆ ಜಯಂತಿ ಟಿ ರೈ, ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿ ಮಾಲತಿ ಜೆ ಶೆಟ್ಟಿ ಇದ್ದರು. ರಾಜೇಶ್ವರಿ ಡಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕವಿತಾ ಶೆಟ್ಟಿ ವಂದಿಸಿದರು.
ಜ್ಯೋತಿ ಪಿ ಶೆಟ್ಟಿ ನಿರೂಪಿಸಿದರು.
ಡಿ. 20 ರಂದು ಶನಿವಾರ ಸಂಜೆ 7 ಕ್ಕೆ ಪೆರ್ಮೆದ ಕಲಾವಿದೆರ್ ಚೇಳಾರ್ ತಂಡದಿಂದ “ಎನ್ನಿಲೆಕ್ಕ ಇಜ್ಜೆರ್” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.21 ರಂದು ಸಂಜೆ 6 ಗಂಟೆಗೆ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ತಂಡದಿಂದ “ಸಂಗೀತ ರಸ ಮಂಜರಿ”, ಬಳಿಕ 7 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ಈ ವರ್ಷದ ಸೂಪರ್ ಹಿಟ್ ಹಾಸ್ಯ ನಾಟಕ “ವೈರಲ್ ವೈಶಾಲಿ” ಪ್ರದರ್ಶನಗೊಳ್ಳಲಿದೆ.
ಡಿ. 20 ಮತ್ತು 21 ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ರವೆರಗೆ ಬಗೆಬಗೆಯ ತಿಂಡಿತಿನಿಸುಗಳ ಫುಡ್ ಫೆಸ್ಟಿವಲ್ ನಡೆಯಲಿದೆ. ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳ ನಡೆಯಲಿದೆ.
ನವನವೀನ ಮಾದರಿ ಕಾಂಚಿಪುರಂ, ಬನಾರಸ್, ರೇಷ್ಮೆ, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿ ಸೀರೆಗಳು ಸಲ್ವಾರ್ ಸೂಟ್, ಕುರ್ತಾಗಳು, ಖಾದಿ ಭಂಡಾರ, ಕಸೂತಿ, ಹಸ್ತಕಲೆ ಬ್ಯಾಗ್ ಗಳು, ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಯಲ್ ಜ್ಯುವೆಲ್ಲರಿ ಮಸಾಲೆ ಹುಡಿಗಳು, ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ ಸಂಗ್ರಹವೂ ಇದೆ.
ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಉತ್ಪನ್ನಗಳು ದೊರೆಯಲಿದೆ. ಇದು ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆಯುವಂತಹ ಕಾರ್ಯಕ್ರಮವಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ


