
ವಿಜಯಪುರ: ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು 2ನೇ ಬಾರಿ ಮುಖ್ಯಮಂತ್ರಿ ಆಗಿ ದಿ. ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಅವರು ಮಾತನಾಡಿದರು.
ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳನ್ನು ಅರ್ಪಿಸುವೆ ಎಂದರು.


