
ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ, ಕಾಲಿವುಡ್ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಈಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೇಡಿ ಆಗಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ, ನಿರೀಕ್ಷೆ ಹೆಚ್ಚು ಮೂಡಿದೆ.
ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಬಹುತಾರಾಗಣದ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣದಿದ್ದರೂ, ಬಾಕ್ಸ್ ಆಫೀಸ್‍ನಲ್ಲಿ ದೊಡ್ಡ ಗಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಲೋಕೇಶ್ ಕನಕರಾಜು ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

ಕೆಲ ಸಮಯದ ಹಿಂದೇಯಷ್ಟೇ ಲೋಕೇಶ್ – ಅಲ್ಲು ಅರ್ಜುನ್ ಪ್ರಾಜೆಕ್ಟ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಅಗಿತ್ತು. ಇದೀಗ ಸಿನಿಮಾದ ಸ್ಕ್ರಿಪ್ಟ್ ಅಂತಿಮ ಆಗಿದ್ದು, ಚಿತ್ರ ಸೆಟ್ಟೇರೋದು ಪಕ್ಕಾ ಆಗಿದೆ.
‘ಪುಷ್ಪ’ ಸಿನಿಮಾದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಖ್ಯಾತ ನಿರ್ಮಾಪಕ ನವೀನ್ ಯೆರ್ನೇನಿ ಮತ್ತು ರವಿಶಂಕರ್ ಜತೆಗೆ ಬನ್ನಿ ವಾಸ್ ನಟ್ಟಿ, ಸ್ಯಾಂಡಿ ಮತ್ತು ಸ್ವಾತಿ ನಿರ್ಮಾಣದಲ್ಲಿ ಕೈಜೋಡಿದ್ದಾರೆ.
ಪುಷ್ಪ ಸರಣಿ ಚಿತ್ರಗಳಿಂದ ದೇಶದಾದ್ಯಂತ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವ ಅಲ್ಲು ಅರ್ಜುನ್ ನಟನೆಯ ಚಿತ್ರಕ್ಕೆ ತಮಿಳಿನ ಯಶಸ್ವಿ ಸಂಗೀತ ನಿರ್ದೇಶಕ ರಾಕ್‍ಸ್ಟಾರ್ ಅನಿರುದ್ಧ್ ತಂಡ ಸೇರಿಕೊಂಡು ಹಿಟ್ ಹಾಡುಗಳು ಪಕ್ಕಾ ಎನ್ನುವಂತಾಗಿದೆ.
ಅಗಸ್ಟ್ ತಿಂಗಳಿನಿಂದ ಚಿತ್ರದ ಚಿತ್ರೀಕರಣ ಆರಂಭ ಆಗಲಿದ್ದು ಚಿತ್ರಕ್ಕೆ ತಾತ್ಕಾಲಿಕವಾಗಿ ಎಎ 23 ಎಂದು ಹೆಸರಿಡಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್, ಯಶಸ್ವಿ ನಿರ್ದೇಶಕ ಲೋಕೇಶ್ ಕನಕ ರಾಜ್ ಮತ್ತು ರಾಕ್ ಸ್ಟಾರ್ ಅನಿರುದ್ದ ಜತೆ ಆಗಿರುವುದು ಚಿತ್ರರಂಗದಲ್ಲಿ ಕುತೂಹಲ ಮನೆ ಮಾಡಿದೆ.


