
ಸಿರಸಿ: ನಮ್ಮ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸದೃಢತೆ ಹಾಗೂ ಉತ್ಸಾಹ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿದ್ದು, ನಿಮ್ಮ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರದರ್ಶನ ತುಂಬಾ ಖುಷಿ ನೀಡಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ ಅವರು ಹರ್ಷ ವ್ಯಕ್ತಪಡಿಸಿದರು.


ತಾಲೂಕಿನ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉತ್ತರ ಕನ್ನಡದ ಆಶ್ರಯದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳ ಆಸಕ್ತಿಯನ್ನು ವೀಕ್ಷಿಸಿದ ಅವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ವಿವಿಧ ಪಂದ್ಯಾವಳಿಗಳನ್ನು ನಡೆಸಿ ಪ್ರೋತ್ಸಾಹಿಸುವುದಾಗಿ ತಿಳಿಸಿದರು.
ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಹೊನ್ನಾವರ ತಾಲೂಕು ಭಾಜನರಾದರೆ ಅಷ್ಟೇ ತೀವ್ರತರವಾದ ಪೈಪೋಟಿ ನೀಡಿ ದ್ವೀತಿಯ ಸ್ಥಾನಕ್ಕೆ ಸಿದ್ದಾಪುರ ತಾಲೂಕು ತೃಪ್ತಿಪಡಬೇಕಾಯಿತು.
ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪ ಕಾರ್ಯದರ್ಶಿಗಳಾದ ಎಮ್ ಎಸ್ ಅಲ್ಲಾಭಕ್ಷ, ಜಿ.ಪಂ ಯೋಜನಾ ನಿರ್ದೇಶಕರಾದ ಕರೀಂ ಅಸಾದಿ, ಜಿ.ಪಂ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿಗಳಾದ ಪ್ರಕಾಶ್ ಹಾಲಮ್ಮನವರ್, ಜಿ ಪಂ ಮುಖ್ಯ ಯೋಜನಾಧಿಕಾರಿಗಳಾದ ಸೋಮಶೇಖರ್ ಮೇಸ್ತ, ಜಿ. ಪಂ ಮುಖ್ಯ ಲೆಕ್ಕಧಿಕಾರಿಗಳಾದ ಆನಂದ್ ಹಬೀಬ್, ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ ಜಹಾಗೀರದಾರ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್ ಎಪಿಒ ಜಿ. ಸತೀಶ್, ಸಹಾಯಕ ನಿರ್ದೇಶಕ ರವಿ ನಾಯ್ಕ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಸಂಬಂಧಿಸಿದ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಇದ್ದರು.


