
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಬೇಲಿಕೇರಿ ಅಕ್ರಮ ಅದಿರು ರಪ್ತು ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಬಿಗ್ ರೀಲಿಫ್ ಸಿಕ್ಕಿದೆ.

ಅನಾರೋಗ್ಯದ ಕಾರಣ ನೀಡಿ ಶಾಸಕ ಸತೀಶ್ ಸೈಲ್ ಅವರು ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ನ್ಯಾಯಪೀಠವು, ಲಿವರ್ ಸಮಸ್ಯೆ ಇರುವ ಕಾರಣದಿಂದ ಚಿಕಿತ್ಸೆಗೆ ಅಗತ್ಯತೆ ಕಾರಣ ನೀಡಿ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ. ಜತೆಗೆ 5 ಲಕ್ಷದ ಮೌಲ್ಯದ ಬಾಂಡ್ ಹಾಗೂ ಒಬ್ಬರ ಜಾಮೀನು ನೀಡುವಂತೆ ಸೂಚಿಸಿದೆ.


