53 ಲಕ್ಷ ಮೌಲ್ಯದ 1ಕ್ಟಿಂಟಲ್ ಗೂ ಹೆಚ್ಚು ಗಾಂಜಾ ವಶ, ಒಡಿಸಾ ಮೂಲದ ವ್ಯಕ್ತಿ ಸೇರಿದಂತೆ 3 ಮಂದಿ ಬಂಧನ: ಪುತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ

 

ಪುತ್ತೂರು : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈಚೆಗೆ ರೂಪಾಯಿ 53 ಲಕ್ಷ ಮೌಲ್ಯದ 1 ಕ್ವಿಂಟಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರೆಸಿದ್ದು, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನ ಸೌಲಭ್ಯ ಮಾಡಿರುವ ಇಬ್ಬರು ಸೇರಿದಂತೆ ಒಡಿಸಾ ಮೂಲದ ಆರೋಪಿ ಬಂಧನ ಮಾಡಲಾಗಿದೆ.

ಈ ಕೃತ್ಯಕ್ಕೆ ಸಹಾಯ ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27), ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬುವವರನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಗಳಿಗೆ ಮಾದಕ ವಸ್ತು ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಸಾ ಮೂಲದ ದೀಪಕ್ ಪಾತ್ರ (37) ಎಂಬುವವರನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಅವರ ನೇತೃತ್ವದಲ್ಲಿ ತನಿಖಾ ತಂಡವು ಒಡಿಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದೆ. ಈ ವೇಳೆ ಆತನಿಂದ ರೂಪಾಯಿ 80 ಸಾವಿರ ಮೌಲ್ಯದ 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ಗುಣಪಾಲ ಜೆ ಹಾಗೂ ಸಿಬ್ಬಂದಿ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೇನ್, ಸುರೇಶ ಹಾಗೂ ದಿವ್ಯಾ ಪ್ರಕಾಶ್ ಅವರ ತಂಡ ಭಾಗಿ ಇದ್ದರು.

  1.  

Leave a Reply

Your email address will not be published. Required fields are marked *