ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

 

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರಿಗೆ ಖಾದಿ ಉಡುಪುಗಳು ಸುಲಭವಾಗಿ ಸಿಗುವಂತೆ ಮಾಡುವುದು ಹಾಗೂ ಖರೀದಿಗೆ ಅನುಕೂಲ ಆಗುವಂತೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿ ಖಾದಿ ಹುಟ್ಟುವಳಿ ಕೇಂದ್ರದಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಾತ್ಕಾಲಿಕ ಖಾದಿ ಮಳಿಗೆ ಆರಂಭಿಸಲಾಯಿತು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಳಿಗೆಗೆ ಭೇಟಿ ನೀಡಿ, ಸಾಂಕೇತಿಕವಾಗಿ ಸರ್ಕಾರಿ ನೌಕರರಿಗೆ ಖಾದಿ ಉಡುಪು ವಿತರಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು, ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ ದೊರೆಯುವ ಜತೆಗೆ, ಗ್ರಾಮೀಣ ಉದ್ಯೋಗ ಸೃಷ್ಟಿಗೂ ಸಹಕಾರಿ ಆಗುತ್ತದೆ ಎಂದರು.

ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಈ ಮಳಿಗೆಗೆ ಭೇಟಿ ನೀಡಿ, ಖಾದಿ ಉಡುಪು ಖರೀದಿಸಿದರು. ಖಾದಿಯ ಮಹತ್ವ ಹಾಗೂ ಸ್ವದೇಶಿ ಉತ್ಪನ್ನಗಳ ಬಳಕೆಯ ಬಗ್ಗೆ ನೌಕರರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಈ ಕಾರ್ಯಕ್ರಮದ ಪ್ರಮುಖ ಆಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿಇದ್ದರು.

  1.  

Leave a Reply

Your email address will not be published. Required fields are marked *