ಮಂಗಳೂರು: ಇಲ್ಲಿನ ಶಿಖಾ ಸುಶೀಲ್ ಅವರು ಪ್ರತಿಷ್ಟಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್- 2026 ಅನ್ನು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.


ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಅವರನ್ನ ವಿಜೇತೆ ಎಂದು ಘೋಷಿಸಲಾಯಿತು. ಸೆರೆನಾ ಎವ್ಜಿನ್ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು. ಫೇ ಮಾರ್ಟಿಸ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನಾರದರು. ದೇಶ ವಿದೇಶಗಳಿಂದ ಸಾವಿರಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದ ಈ ಸೌಂದರ್ಯ ಸ್ಪರ್ಧೆಯಲ್ಲಿ ದ್ವಿತೀಯ ಹಂತಕ್ಕೆ 25 ಮಂದಿ ಸ್ಪರ್ಧಿಗಳು ಆಯ್ಕೆಯಾಗಿದ್ದರು.
ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಆತ್ಮಸ್ಥೈರ್ಯ, ಸ್ವ ಪರಿಚಯಿಸುವಿಕೆ, ರ‍್ಯಾಂಪ್ ವಾಕ್, ಪ್ರಶ್ನೋತ್ತರಿ, ಹಾಗೂ ಎಕ್ಸ್ ಫಾಕ್ಟರ್ ವಿಭಾಗಳಲ್ಲಿ ಮಿಂಚಿದ ಶಿಖಾ ಸುಶೀಲ್, ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್ ಕಿರೀಟಕ್ಕೆ ಭಾಜನರಾದರು. ಹಿಸ್ನಾ ಇಂಟರ್ ನ್ಯಾಷನಲ್ ನಿರ್ದೇಶಕರಾದ ರೊನಾಲ್ಡ್ ಪಿಂಟೋ , ಪತ್ನಿ ದೊರೊತಿ ಪಿಂಟೋ, ವಿಜೇತರನ್ನು ಕಿರೀಟದ ಜತೆಗೆ ತಲಾ ಮೂರು, ಎರಡು ಹಾಗೂ ಲಕ್ಷದ ನಗದು ಬಹುಮಾನಗಳನ್ನು ನೀಡಿ ಗೌರವಿಸಿದರು. ಅಂತಿಮ ಸುತ್ತಿಗೆ ಪ್ರವೇಶಿಸಿದ ಇತರ 9 ಸ್ಪರ್ಧಿಗಳು ವೈಯುಕ್ತಿಕ ಬಿರುದುಗಳೊಂದಿಗೆ ತಲಾ ಇಪ್ಪತ್ತೈದು ಸಾವಿರ ನಗದು ಪಡೆದುಕೊಂಡರು.



