ಬೆಂಗಳೂರು: 2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು, ಫೆ. 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಫೆ. 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾರ್ಚ್ 18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು ವಿದ್ಯಾರ್ಥಿಗಳ 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 6,46,801 ವಿದ್ಯಾರ್ಥಿಗಳು ಹೊಸಬರು ಮತ್ತು 50,540 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 13,022 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 8,12,855 ವಿದ್ಯಾರ್ಥಿಗಳು ಹೊಸಬರು ಮತ್ತು 62,845 ಪುನರಾವರ್ತಿತ ವಿದ್ಯಾರ್ಥಿಗಳಿದ್ದರೆ, 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ:
ಫೆ. 28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆಎಸ್ಸೆಸ್ಸೆಲ್ಸಿ ಪರೀಕ್ಷೆ-1 ರ ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆ
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನಎಸ್ಸೆಸ್ಸೆಲ್ಸಿ ಪರೀಕ್ಷೆ-2 ವೇಳಾಪಟ್ಟಿ
ಮೇ 18: ಪ್ರಥಮ ಭಾಷೆ
ಮೇ 19: ವಿಜ್ಞಾನ
ಮೇ 20: ದ್ವಿತೀಯ ಭಾಷೆ
ಮೇ 21: ಗಣಿತ
ಮೇ 22: ತೃತೀಯ ಭಾಷೆ
ಮೇ 23: ಸಮಾಜ ವಿಜ್ಞಾನ



