ಕಾರ್ಕಳ: ಮನೆಯಲ್ಲಿ ಕುಳಿತುಕೊಂಡಿದ್ದ ಯುವಕ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಯರ್ಲಪಾಡಿ ನಡೆದಿದೆ. ಯರ್ಲಪಾಡಿ ಗ್ರಾಮದ ಹೇಮಲತಾ ಎಂಬುವವರ ಮಗ ಸುಹೇಶ್ (22) ಮೃತ ಯುವಕ ಎಂದು ಗುರುತಿಸಲಾಗಿದೆ. 15 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದ, ಇವರು ಔಷಧಿ ಸೇವಿಸುತ್ತಿದ್ದರು. ಫೆ.19 ರಂದು ಮನೆಯಲ್ಲಿ ಕುಳಿತಿದ್ದ ವೇಳೆ ಏಕಾಏಕಿ ಕೆಳಗೆ ಬಿದ್ದಿರನ್ನೇಲಾಗಿದೆ.

ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸುಹೇಶ್ ಅವರನ್ನು ಕೂಡಲೇ ಕಾರ್ಕಳದ ಖಾಸಗಿ ಆಸ್ಫತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



