ಮಂಗಳೂರು: ಇದೇ 24 ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನವನ್ನು ಆಚರಣೆ ಹಾಗೂ ಅಭಿವಂದನೆ ಹಾಗೂ 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ತಮ್ಮದೇ ವಿಶಿಷ್ಟ ಕೊಡುಗೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿರುವ ಡಾ. ರಾಜೇಂದ್ರ ಕುಮಾರ್ ಅವರ ಕೊಡುಗೆ ನೀಡಿದ್ದಾರೆ. ಬ್ಯಾಂಕ್ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವಿಭಜಿತ ಜಿಲ್ಲೆಯ ಸಹಕಾರಿಗಳು ಸೇರಿಕೊಂಡು ಸಹಕಾರಿ ಜನ್ಮದಿನದ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಸಹಕಾರ ಕ್ಷೇತ್ರ ಸದೃಢಗೊಳಿಸುವ ಚಿಂತನೆಯ ಜತೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿ ಉಂಟು ಮಾಡಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರ ಹಾಗೂ ಸಹಕಾರಿಗಳಿಗೆ ಮಾದರಿ ಆಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯ ಯೋಜನೆ ರೂಪಿಸಿ, ನಮಗೆಲ್ಲ ಮಾರ್ಗದರ್ಶಕರಾಗಿದ್ದಾರೆ. ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮ ಆಯೋಜನೆ ಆಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರ ಆಗಿರುವುದರಿಂದ ಸಮಾಜದ ಎಲ್ಲ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದರು.
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಜನ್ಮದಿನವನ್ನು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಅವರು ಉದ್ಘಾಟನೆ ಮಾಡಲಿದ್ದು, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಅವರು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿ, ಅಭಿವಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಶಶಿಕುಮಾರ್ ರೈ ಬಾಲ್ಯೊಟ್ಟು, ವಿನಯ್ ಕುಮಾರ್ ಸೂರಿಂಜೆ, ಸದಾಶಿವ ಉಳ್ಳಾಲ್, ಎಸ್. ಬಿ. ಜಯರಾಮ ರೈ, ಎಕ್ಕಾರ್ ಮೋನಪ್ಪ ಶೆಟ್ಟಿ, ವಾದಿರಾಜ್, ಗೋಪಾಲಕೃಷ್ಣ ಭಟ್, ಭಾಸ್ಕರ್ ಕೋಟ್ಯಾನ್ ಇದ್ದರು.



