
ಸಿರಸಿ: ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುವುದರಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿರಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಅಮ್ಮನವರ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Students appearing for the Second PUC examinations have been provided free travel in the transport company’s buses from their residence to the examination centers as the examination centers are assigned to educational institutions other than their own, said Basavaraj Ammanavar, Divisional Controller, North West Karnataka Road Transport Corporation, Sirsi.
The Second PUC examination will be held from Feb. 28 to March 17. Students appearing for the examination can travel free of cost in the company’s city, suburban, regular and express buses to go from their residence to the assigned examination centers and return to their residence after completing the examination, the release said.




