
ಮಂಗಳೂರು: 24 ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನ, ಅಭಿವಂದನಾ ಹಾಗೂ 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಕಚೇರಿ ಸಭಾಂಗಣದಲ್ಲಿ ಎಲ್ಲ ಸಿದ್ದತೆ ಮಾಡಲಾಗಿದೆ.
ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ತಮ್ಮದೇ ವಿಶಿಷ್ಟ ಕೊಡುಗೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿರುವ ಡಾ. ರಾಜೇಂದ್ರ ಕುಮಾರ್ ಅವರ ಕೊಡುಗೆ ನೀಡಿದ್ದಾರೆ. ಬ್ಯಾಂಕ್ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವಿಭಜಿತ ಜಿಲ್ಲೆಯ ಸಹಕಾರಿಗಳು ಸೇರಿಕೊಂಡು ಸಹಕಾರಿ ಜನ್ಮದಿನದ ಆಚರಣೆಗೆ ಸಿದ್ಧತೆ ನಡೆದಿದೆ.

ಸಹಕಾರ ಕ್ಷೇತ್ರ ಸದೃಢಗೊಳಿಸುವ ಚಿಂತನೆಯ ಜತೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿ ಉಂಟು ಮಾಡಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರ ಹಾಗೂ ಸಹಕಾರಿಗಳಿಗೆ ಮಾದರಿ ಆಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯ ಯೋಜನೆ ರೂಪಿಸಿ, ಸಹಕಾರಿಗಳಿಗೆ ಮಾರ್ಗದರ್ಶಕರಾಗಿರುವ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮ ಆಯೋಜನೆ ಆಗಿದೆ.
ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಜನ್ಮದಿನದಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಫರೀದ್, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಪಾಲ್ಗೊಳ್ಳಲಿದ್ದಾರೆ.




