ಎಸ್ಸಿ, ಎಸ್ಟಿ ದೌರ್ಜನ್ಯ ನಿಷೇಧ ಕಾಯ್ದೆ, ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿದ ಸಹಾಯಕ ನಿರ್ದೇಶಕ ಜಿ. ಸತೀಶ್

ಕಾರವಾರ: ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಎಸ್ ಡಿ ಎಂ ಕಾಲೇಜ್ ಹೊನ್ನಾವರ ಆಶ್ರಯದಲ್ಲಿ ಇಲ್ಲಿನ ಎಸ್ ಡಿ ಎಂ ಕಾಲೇಜ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ನಿಷೇಧ ಕಾಯ್ದೆ, ನಾಗರಿಕ ಹಕ್ಕು ಅಧಿನಿಯಮ, ಪೋಕ್ಸೊ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಹಾಗೂ ಇನ್ನಿತರೆ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸತೀಶ್ ವಹಿಸಿದ್ದರು. ಪ್ರಾಂಶುಪಾಲ ಜಿ. ಎನ್. ಭಟ್ ಅವರಿ ಉದ್ಘಾಟಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ಸಂಪದ ಗುನಗಾ ಉಪನ್ಯಾಸ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಹೇಶ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಎಂ. ಜಿ. ಹೆಗಡೆ ಮತ್ತು ಎಸ್ ಸಿ ಎಸ್ ಟಿ ಸೆಲ್ ಸಂಚಾಲಕ ಗಣೇಶ್ ಅಳವಂಡಿ ಅವರು ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಸುಮಂಗಲಾ ಆರ್ ಭಟ್ ಅವರು ಸ್ವಾಗತಿಸಿದರು. ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ ಹಾಗೂ ಇತರೆ ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.

 

  1.  

Leave a Reply

Your email address will not be published. Required fields are marked *