ಉ.ಕ ಜಿಲ್ಲೆಯ 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ, ನಿಷೇಧಾಜ್ಞೆ ಜಾರಿ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫೆ. 28 ರಿಂದ ಮಾರ್ಚ್ 17 ರವರೆಗೆ 35 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಸದರಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತಿಗೆ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಭಾರತೀಯ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ ಮೊಬೈಲ್ ಫೋನ್ ಗಳು, ಸ್ಮಾರ್ಟ್ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ಗಳನ್ನು ತರಲು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *