ಪತ್ರಕರ್ತ, ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ: ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲು

ಬ್ರಹ್ಮಾವರ: ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಪತ್ರಕರ್ತ ಶೇಷಗಿರಿ ಭಟ್ (53) ಅವರು ಆರೂರು ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪ್ರಜಾವಾಣಿ ಪತ್ರಿಕೆ ಬ್ರಹ್ಮಾವರ ತಾಲೂಕು ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಬ್ರಹ್ಮಾವರ ಚಾಂತಾರು ಕ್ರಾಸ್ ಲ್ಯಾಂಡ್ ಪದವಿ ಪೂರ್ವ ಕಾಲೇಜಿನಲ್ಲಿ ಉಪಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಪತ್ನಿ ಶಾಲಾ ಶಿಕ್ಷಕಿ ಆಗಿದ್ದು, ಮಗ ಶಿವಮೊಗ್ಗದಲ್ಲಿ ದ್ವೀತಿಯ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ.

ಬೆಳಿಗ್ಗೆ ಪತ್ನಿಯನ್ನು ಶಾಲೆಗೆ ಹೋಗುವುದಕ್ಕೆ ಬಸ್ ನಿಲ್ದಾಣಕ್ಕೆ ಬಿಟ್ಟು ಬಂದಿದ್ದ ಅವರು, ಮನೆಯಲ್ಲಿನ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರಿಇದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಅವರು, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದಾರೆ. ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *