ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಾಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್ಐ ನಾಸೀರ್ ಹುಸೇನ್ (58) ಅವರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ನಮ್ಮ ಪೊಲೀಸ್, ನಮ್ಮ ಹೆಮ್ಮೆ. ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿಲೋ ಮೀಟರ್ ಮ್ಯಾರಾಥಾನ್ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಿಎಎಸ್ಐ ನಾಸೀರ್ ಹುಸೇನ್ ಸೇರಿದಂತೆ ಪೊಲೀಸರು ಪಾಲ್ಗೊಂಡಿದ್ದರು.
ಉಡುಪಿ ನಗರ ಪಂಚಾಯತ್ ಮುಂಭಾಗದಲ್ಲಿ ಮ್ಯಾರಾಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನ ನಾಸಿರ್ ಹುಸೇನ್ ಅವರು, ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಂಡ್ಲೂರಿನಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. 58 ವರ್ಷದ ನಾಸಿರ್ ಹುಸೇನ್ 2010 ರಲ್ಲಿ ಪಿಎಸ್ಐ ಆಗಿ ಇಲಾಖೆ ಸೇರಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳ ಇದ್ದಾರೆ.



